ಮೂಡುಬಿದಿರೆ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜೂ. 21 ರಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ವಿದ್ಯಾಸಂಸ್ಥೆಗಳ ಸುಮಾರು2,600ಕ್ಕೂ ಅಧಿಕ ವಿದ್ಯಾರ್ಥಿಗಳು ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಬೆಳಿಗ್ಗೆ 6.30ಯೋಗ ಪ್ರಾತ್ಯಕ್ಷಿಕೆಯನ್ನು ನೀಡಲಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕಳೆದ ಒಂದು ವಾರದಿಂದ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ವಿದ್ಯಾ ಸಂಸ್ಥೆಗಳ ಜೊತೆಗೆ ಮೂಡುಬಿದಿರೆ ಮತ್ತು ಮಂಗಳೂರು ವಲಯದ ಅನೇಕ ಶಾಲಾ ಕಾಲೇಜು ಮತ್ತು ಸುತ್ತಲಿನ ಸಾರ್ವಜನಿಕರಿಗೆ 35ಕ್ಕೂ ಹೆಚ್ಚು ಕೇಂದ್ರಗಳಲ್ಲಿ 10 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಯೋಗ ತರಬೇತಿಯನ್ನು ನೀಡುತ್ತಿದ್ದು, ರಾಜ್ಯ ಮತ್ತು ಹೊರರಾಜ್ಯದ ಸಂಘ ಸಂಸ್ಥೆಗಳಿಗೂ ಆಳ್ವಾಸ್ ವಿದ್ಯಾರ್ಥಿಗಳು ಪ್ರತ್ಯಕ್ಷವಾಗಿ ಹಾಗೂ ಅಂತರ್ಜಾಲ ಮೂಲಕ ತರಬೇತಿ ನೀಡುತ್ತಿದ್ದಾರೆ. ಜೂನ್ 21 ರ ಒಳಗಾಗಿ 8 ರಿಂದ 10 ಸಾವಿರಕ್ಕೂ ಹೆಚ್ಚು ಮಂದಿ ಯೋಗ ತರಬೇತಿಯನ್ನು ಪಡೆದುಕೊಂಡು ಯೋಗದ ಮಹತ್ವವನ್ನು ತಿಳಿದುಕೊಳ್ಳಲಿದ್ದಾರೆ.
ಜೂನ್ 21 ರಂದು ನಡೆಯುವ ಯೋಗ ಪ್ರಾತ್ಯಕ್ಷಿಕೆಯು ಆಳ್ವಾಸ್ ಎಜುಕೇಶನ್ ಫೌಂಡೇಶನ್, ಯೂಟ್ಯೂಬ್ ಪೇಜ್ ಹಾಗೂ ಇತರ ಫೇಸ್ಟುಕ್, ಇನ್‌ಸ್ಟಾಗ್ರಾಂ ಜಾಲತಾಣಗಳಲ್ಲಿ ನೇರ ಪ್ರಸಾರವಾಗಲಿದ್ದು, ದಕ್ಷಿಣ ಕನ್ನಡದ ಆಯುಷ್ ಇಲಾಖೆಯ ಸಹಯೋಗದೊಂದಿಗೆ ಈ ಕಾರಕವು ಜರುಗುತ್ತಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲೆ ಡಾ| ವನಿತಾ ಶೆಟ್ಟಿ... ಪ್ರಾಧ್ಯಪಕಿ ಡಾ| ಅರ್ಚನಾ ಉಪಸ್ಥಿತರಿದ್ದರು.
0 Comments