ಮೂಡುಬಿದಿರೆ: ಪ್ರಧಾನಿ ನರೇಂದ್ರ ಮೋದೀಜಿ ಅವರ ನೇತೃತ್ವದ ಕೇಂದ್ರ ಸರಕಾರವು 8ವರ್ಷಗಳನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡುಬಿದಿರೆ ಮಂಡಲದ ವತಿಯಿಂದ ಆಯೋಜಿಸಲಾದ "ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ" ಕಾರ್ಯಕ್ರಮದ ಪ್ರಯುಕ್ತ ಎ.ಜೆ ಹಾಸ್ಪಿಟಲ್ &ರಿಸರ್ಚ್ ಸೆಂಟರ್ ಕುಂಟಿಕಾನ ಮಂಗಳೂರು ಇದರ ಸಹಯೋಗದೊಂದಿಗೆ ಮೂಡುಬಿದಿರೆ ಸ್ಕೌಟ್ &ಗೈಡ್ಸ್ ಕನ್ನಡಭವನದಲ್ಲಿ ಭಾನುವಾರ ನಡೆದ ರಕ್ತದಾನ ಶಿಬಿರ ನಡೆಯಿತು.
ಶಾಸಕ ಉಮಾನಾಥ್ ಕೋಟ್ಯಾನ್ ಅವರು ಶಿಬಿರವನ್ನು ಉದ್ಘಾಟಿಸಿ
ಮಾತನಾಡಿ ರಕ್ತವನ್ನು ನೀಡಿ ಒಂದು ಜೀವವನ್ನು ಉಳಿಸಬಹುದು ಆ ನಿಟ್ಟಿನಲ್ಲಿ ಯುವಕರು ರಕ್ತದಾನ ಮಾಡಲು ಮುಂದೆ ಬಂದಿದ್ದು, ಸುಮಾರು 100 ಬಾಟಲಿಯಷ್ಟಾದರೂ ರಕ್ತವನ್ನು ಸಂಗ್ರಹಿಸಿ, ಸಮಾಜದಲ್ಲಿ ರಕ್ತದ ಅವಶ್ಯಕತೆ ಇರುವವರಿಗೆ ರಕ್ತವನ್ನು ನೀಡಬೇಕೆಂಬ ಉದ್ದೇಶದಿಂದ ಭಾರತೀಯ ಜನತಾ ಪಾರ್ಟಿ ವತಿಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ ಮಾತನಾಡಿ, ರಕ್ತದಾನ ಶ್ರೇಷ್ಠ ದಾನ.ಪಕ್ಷದ ಕಾರ್ಯಕರ್ತರು ಹಲವಾರು ಸೇವಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜದ ನಡುವೆ ಪಕ್ಷವು ಕೆಲಸವನ್ನು ಮಾಡಬೇಕೆಂಬ ಉದ್ದೇಶದಿಂದ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ರಕ್ತದಾನ ಶಿಬಿರ ಹಾಗೂ ಸಮಾವೇಶವನ್ನು ಆಯೋಜಿಸಿದ್ದು, ಕಾರ್ಯಕರ್ತರೆಲ್ಲಾ ಸೇರಿ ರಕ್ತದಾನ ಮಾಡುವುದರ ಮೂಲಕ ಸೇವಾ ಚಟುವಟಿಕೆಯನ್ನು ಮುಂದುವರೆಸೋಣ ಎಂದು ಶಿಬಿರಕ್ಕೆ ಶುಭ ಹಾರೈಸಿದರು.
ಜಿಲ್ಲಾ ಕಾರ್ಯದರ್ಶಿ ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷ ಈಶ್ವರ್ ಕಟೀಲ್, ಎ. ಪಿ. ಎಂ. ಸಿ ಅಧ್ಯಕ್ಷ ಕೃಷ್ಣರಾಜ ಹೆಗ್ಡೆ, ಮಂಡಲಾಧ್ಯಕ್ಷ ಸುನೀಲ್ ಆಳ್ವ, ಬಿಜೆಪಿ ಮುಖಂಡರಾದ ಸುಕೇಶ್ ಶೆಟ್ಟಿ , ಬಾಹುಬಲಿ ಪ್ರಸಾದ್, ವಿನೋದ್ ಬೆಳ್ಳಯಾರು, ನಾಗರಾಜ ಪೂಜಾರಿ, ಲಕ್ಷ್ಮಣ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ್ ಶೆಟ್ಟಿಗಾರ್, ಕೇಶವ ಕರ್ಕೇರಾ, ಪುತ್ತಿಗೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕಿಶೋರ್ ಆಸ್ಪತ್ರೆಯ ವೈದರು ಹಾಗೂ ಸಿಬ್ಬಂದಿ ವರ್ಗ ಹಾಗೂ ಮಂಡಲದ ಪದಾಧಿಕಾರಿಗಳು, ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
0 Comments