ಮೂಡುಬಿದಿರೆ ಜೈನ ಪದವಿಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 93 ಫಲಿತಾಂಶ

ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆಮೂಡುಬಿದಿರೆ ಜೈನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 590ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಕುಮಾರಿ ಕೃತಿಕಾ 594 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ವಾಣಿಜ್ಯ ವಿಭಾಗದಲ್ಲಿ ಮೂರನೇ ಸ್ಥಾನವನ್ನು ಪಡೆದಿದ್ದಾರೆ.

ವಿಜ್ಞಾನ ವಿಭಾಗದ ಕುಮಾರಿ ಶ್ರೇಯ ಬಿ.ಆರ್ 593 ಅಂಕಗಳನ್ನು ಪಡೆದು ವಿಜ್ಞಾನ ವಿಭಾಗದಲ್ಲಿ ಆರನೇ ಸ್ಥಾನವನ್ನು ಪಡೆದಿದ್ದಾರೆ. ವಾಣಿಜ್ಯ ವಿಭಾಗದ ಕುಮಾರಿ ಶರಣ್ಯ ಪುತ್ರಾಯ 591 ಅಂಕಗಳನ್ನು ಪಡೆದು ರಾಜ್ಯಮಟ್ಟದ ವಾಣಿಜ್ಯ ವಿಭಾಗದಲ್ಲಿ ಆರನೆಯ ಸ್ಥಾನವನ್ನು ಪಡೆದಿದ್ದಾರೆ. 329 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 305 ವಿದ್ಯಾರ್ಥಿಗಳು ಉತ್ತರರಾಗಿ ಕಾಲೇಜಿಗೆ 93ಶೇಕಡಾ ಫಲಿತಾಂಶ ಬಂದಿದ್ದು ಒಟ್ಟು 101 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಉನ್ನತ ಶ್ರೇಣಿ ಹಾಗೂ 161 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತರ ನೀಡಿದ್ದಾರೆ.

Post a Comment

0 Comments