ಬಿಜೆಪಿಯಿಂದ ವಿಕಾಸ್ ತೀರ್ಥ ಬೈಕ್ ಜಾಥ

ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ 8ನೇ ವರ್ಷಗಳ ಸಂಭ್ರಮಾಚರಣೆಯ ಅಂಗವಾಗಿ ಯುವ ಮೋರ್ಚಾ ಮೂಲ್ಕಿ-ಮೂಡುಬಿದಿರೆ ವತಿಯಿಂದ ವಿಕಾಸ್ ತೀರ್ಥ ಬೈಕ್ ಜಾಥಾವನ್ನು ಮೂಡುಬಿದಿರೆಯಿಂದ ಬಿ.ಸಿ ರೋಡ್‌ವರೆಗೆ ಭಾನುವಾರ ಹಮ್ಮಿಕೊಳ್ಳಲಾಯಿತು. 

ವಿದ್ಯಾಗಿರಿಯಲ್ಲಿರುವ ಬಿಜೆಪಿ ಕಚೇರಿ ಮುಂಭಾಗದಲ್ಲಿ ಜಾಥಾಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಚಾಲನೆ ನೀಡಿದರು. 

ನಂತರ ಮಾತನಾಡಿದ ಕೋಟ್ಯಾನ್ ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ಯಶಸ್ವಿಯಾಗಿ 8 ವರ್ಷಗಳನ್ನು ಪೂರೈಸಿದ್ದು, ಈ ಸುಸಂದರ್ಭದಲ್ಲಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಮೋದಿ ಅವರ ನಾಯಕತ್ವದಿಂದ ದೇಶ ರಾಮರಾಜ್ಯ  ಹಾಗೂ ವಿಶ್ವಗುರುವಾಗಲು ಸಾಧ್ಯ ಎಂದರು. 

ಬಿಜೆಪಿ ಮಂಡಲ ಅಧ್ಯಕ್ಷ ಸುನೀಲ್ ಆಳ್ವ, ಬಿಜೆಪಿ ದ.ಕ ಕಾರ್ಯಾಲಯ ಕಾರ್ಯದರ್ಶಿ ಸುಕೇಶ್ ಶೆಟ್ಟಿ, ಪುರಸಭೆ ಉಪಾಧ್ಯಕ್ಷೆ ಸುಜಾತ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ನಾಗರಾಜ ಪೂಜಾರಿ, ಯುವಮೋರ್ಚಾ ಅಧ್ಯಕ್ಷ ಅಶ್ವತ್ಥ್ ಪಣಪಿಲ, ಪ್ರಧಾನ ಕಾರ್ಯದರ್ಶಿಗಳಾದ ಧನುಷ್ ಕುಲಾಲ್, ಚರಣ್, ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷ ರಾಜೇಶ್, ರೈತ ಮೋರ್ಚಾದ ಅಧ್ಯಕ್ಷ ಸೋಮನಾಥ ಕೋಟ್ಯಾನ್, ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಲಕ್ಷಣ್ ಪೂಜಾರಿ, ಪುರಸಭೆ ಸದಸ್ಯರು, ವಿವಿಧ ಗ್ರಾಪಂಗಳ ಸದಸ್ಯರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಜಾಥಾದಲ್ಲಿ ಭಾಗವಹಿಸಿದರು.

Post a Comment

0 Comments