ಮಂಗಳೂರಿನಲ್ಲಿ ರಾಣಿ ಅಬ್ಬಕ್ಕ,ಉಡುಪಿಯಲ್ಲಿ ಕೋಟಿ ಚೆನ್ನಯ,ಉತ್ತರ ಕನ್ನಡದಲ್ಲಿ ಹಿಂಜಾ ನಾಯ್ಕ್ ಹೆಸರಿನಲ್ಲಿ ನೂತನ ಸೈನಿಕ ಶಾಲೆ: ಕೋಟ

ಜಾಹೀರಾತು/Advertisment
ಜಾಹೀರಾತು/Advertisment

ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಅಬ್ಬಕ್ಕನ ಹೆಸರಿನಲ್ಲಿ ಹಾಗೂ ಉಡುಪಿ ಜಿಲ್ಲೆಯಲ್ಲಿ ತುಳುನಾಡಿನ ಅವಳಿ ವೀರರಾದ ಶ್ರೀ ಕೋಟಿ ಚೆನ್ನಯರ ಹೆಸರಿನಲ್ಲಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರನಾದ ಹಿಂಜಾ ನಾಯ್ಕ್ ಹೆಸರಿನಲ್ಲಿ ಸೈನಿಕ ಶಾಲೆಯನ್ನು ತೆರೆಯಲಾಗುವುದು ಎಂದು ರಾಜ್ಯದ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ತಿಳಿಸಿದರು.

ಉಡುಪಿಯ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಸೈನಿಕ ವ್ಯಕ್ತಿಗೆ ಜಿಲ್ಲೆಯ ಹೆಚ್ಚಿನ ಯುವಕರನ್ನು ಆಕರ್ಷಿಸುವ ಹಾಗೂ ಅದಕ್ಕೆ ಪೂರಕವಾಗುವಂತೆ ತರಬೇತಿ ಕೊಡುವ ನಿಟ್ಟಿನಲ್ಲಿ ಸೈನಿಕ ಶಾಲೆ ಆರಂಭಿಸುವ ಬಗ್ಗೆ ಯೋಚನೆ ನಡೆಸಲಾಗಿದೆ. ಈ ಬಗ್ಗೆ ಮೊದಲ ಹಂತವಾಗಿ ಮೂರು ಜಿಲ್ಲೆಗಳನ್ನು ಆಯ್ಕೆ ಮಾಡಿದ್ದು; ಈ ಮೂರು ಜಿಲ್ಲೆಗಳಲ್ಲಿ ಶೀಘ್ರದಲ್ಲೇ ಸೈನಿಕ ಶಾಲೆಯನ್ನು ತೆರೆಯಲಾಗುವುದು ಹಾಗೂ ಸೈನ್ಯಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಯುವಕರನ್ನು ಸಿದ್ಧಪಡಿಸಲು ಈ ಶಾಲೆಯಲ್ಲಿ ತರಬೇತಿ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.

Post a Comment

0 Comments