ಮೂಡುಬಿದಿರೆ: ಕಟ್ಟಡ ಕಾರ್ಮಿಕರ ವಲಯಮಟ್ಟದ ಸಮ್ಮೇಳನ

ಜಾಹೀರಾತು/Advertisment
ಜಾಹೀರಾತು/Advertisment

 


ಮೂಡುಬಿದಿರೆ: ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಫೆಡರೇಶನ್ ಮೂಡುಬಿದಿರೆ ವಲಯ ಸಮಿತಿ ವತಿಯಿಂದ ಭಾನುವಾರ ಸಮಾಜಂದಿರದಲ್ಲಿ  ಕಟ್ಟಡ ಕಾರ್ಮಿಕರ ವಲಯ ಮಟ್ಟದ ಸಮ್ಮೇಳನವನ್ನು ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಫೆಡರೇಶನ್‌ನ ದ.ಕ ಜಿಲ್ಲಾಧ್ಯಕ್ಷ ವಸಂತ ಆಚಾರಿ ಉದ್ಘಾಟಿಸಿದರು 

ನಂತರ ಮಾತನಾಡಿದ ಅವರು ಆಡಳಿತ ವ್ಯವಸ್ಥೆಯ ಲೋಪದೋಷಗಳ ವಿರುದ್ಧ ಹೋರಾಟ ಮಾಡುವುದು ಮಾತ್ರವಲ್ಲ ಮಾತನಾಡಿದರೂ ಸುಳ್ಳು ಕೇಸುಗಳನ್ನು ದಾಖಲಿಸಿ ಬಡವರ, ದುಡಿಯುವ ವರ್ಗದ ಜನರ ಹೋರಾಟಗಳನ್ನು ಹತ್ತಿಕ್ಕುವ ಪ್ರಯತ್ನ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದಾಗುತ್ತಿದೆ. ಇಂದು ಆಡಳಿತ ವ್ಯವಸ್ಥೆ ಶ್ರಮಿಕ ವರ್ಗದ ಸಮಸ್ಯೆಗಳಿಗೆ ಕಿವಿಗೊಡದೆ, ಜಾತಿ, ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸವನ್ನು ಮಾಡುತ್ತಿದೆ. ಜನರ ಹಿತಾಸಕ್ತಿಗೆ ವಿರುದ್ಧವಾಗಿ ದುಡಿಯುವ ವರ್ಗವನ್ನು ಸರ್ಕಾರ ಶೋಷಿಸುತ್ತಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಫೆಡರೇಶನ್‌ನ ದ.ಕ ಜಿಲ್ಲಾಧ್ಯಕ್ಷ ವಸಂತ ಆಚಾರಿ ಆರೋಪಿಸಿದರು. 

 ಈ ಸಂದರ್ಭದಲ್ಲಿ ಸಿಐಟಿಯು ಮೂಡುಬಿದಿರೆ ತಾಲೂಕು ಅಧ್ಯಕ್ಷೆ ರಮಣಿ, ಕಾರ್ಯದರ್ಶಿ ರಾಧ, ಕಟ್ಟಡ ಕಾರ್ಮಿಕರ ಸಂಘದ ತಾಲೂಕು ಅಧ್ಯಕ್ಷ ಜಯಾನಂದ ಪೂಜಾರಿ, ಪ್ರಧಾನ ಕಾರ್ಯದರ್ಶಿ ಶಂಕರ್ ವಾಲ್ಪಾಡಿ, ಪದಾಧಿಕಾರಿಗಳಾದ ಕೃಷ್ಣಪ್ಪ ನಡಿಗುಡ್ಡೆ, ಕೃಷ್ಣಪ್ಪ ಪೂಜಾರಿ, ಸೀತಾರಾಮ ಶೆಟ್ಟಿ, ಸಂಜೀವ ಪೂಜಾರಿ ಮಾರೂರು ಉಪಸ್ಥಿತರಿದ್ದರು.

Post a Comment

0 Comments