ಮೂಡುಬಿದಿರೆ: ಪ್ರಾಥಮಿಕ ಆರೋಗ್ಯ ಕೇಂದ್ರ ಶಿರ್ತಾಡಿ ಇಲ್ಲಿ ಕಳೆದ ಎಂಟು ತಿಂಗಳಿನಿಂದ ವೈದ್ಯಾಧಿಕಾರಿಗಳು ಇಲ್ಲದೆ ಈ ಭಾಗದ ಬಡ ಜನರ ಸಂಕಷ್ಟಗಳನ್ನು ಎದುರಿಸುತ್ತಿದ್ದು, ಇದರ ಕುರಿತು ಇಲಾಖೆಗಳ ಗಮನಸೆಳೆದರೂ ಕೂಡ ಸಂಪೂರ್ಣವಾಗಿ ಈ ಭಾಗದ ಬಡಜನರನ್ನು ಸರಕಾರ ನಿರ್ಲಕ್ಷಿಸಿರುವುದನ್ನು ಪ್ರತಿಭಟಿಸಿ ಇಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಈ ಪ್ರತಿಭಟನಾ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಮೂಡುಬಿದಿರೆ ನಗರ ಕಾಂಗ್ರೆಸ್ ಅಧ್ಯಕ್ಷ ಪುರಂದರ ದೇವಾಡಿಗ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಜಯಕುಮಾರ್ ಶೆಟ್ಟಿ, ಕಲ್ಲಬೆಟ್ಟು ಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರವೀಣ್ ಜೈನ್, ಚಂದ್ರಹಾಸ ಸನಿಲ್, ರಾಜೇಶ್ ಕಡಲಕೆರೆ, ಸುರೇಶ್ ಕೋಟ್ಯಾನ್, ಆಲ್ವಿನ್ ಮಿನೇಜಸ್, ಅರುಣ್ ಕುಮಾರ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರು ಮತ್ತು ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯವರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರಿಂದ ಮನವಿಯನ್ನು ಸ್ವೀಕರಿಸಿದರು.
0 Comments