ಮೂಡುಬಿದಿರೆ: ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸದೆ ಇದ್ದುದರಿಂದ ಬೆಳುವಾಯಿ ಗ್ರಾ.ಪಂಚಾಯತ್ ನಲ್ಲಿ ನಡೆಯಬೇಕಾಗಿದ್ದ ದ್ವಿತೀಯ ಸುತ್ತಿನ ಗ್ರಾಮಸಭೆಯನ್ನು ರದ್ದುಗೊಳಿಸಲಾಗಿದೆ.
ತಮಗೆ ವಿವಿಧ ಇಲಾಖೆಗಳಲ್ಲಿ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ಬೇಕು ಮತ್ತು ಕೆಲವೊಂದು ಸಮಸ್ಯೆಗಳ ಬಗ್ಗೆ ಕೇಳಲು ಇತ್ತು ಆದರೆ ಅಧಿಕಾರಿಗಳೇ ಗ್ರಾಮಸಭೆಗೆ ಗೈರಾದರೆ ನಮ್ಮ ಸಮಸ್ಯೆಗಳನ್ನು ಯಾರಲ್ಲಿ ಕೇಳುವುದು ಎಂದು ಆಕ್ರೋಶ ವ್ಯಕ್ತ ಪಡಿಸಿದ ಗ್ರಾಮಸ್ಥರು ಗ್ರಾಮಸಭೆಯನ್ನು ರದ್ದುಗೊಳಿಸುವಂತೆ ಪಟ್ಟು ಹಿಡಿದ ಹಿನ್ನಲೆಯಲ್ಲಿ ಗ್ರಾಮಸಭೆಯನ್ನು ರದ್ದುಗೊಳಿಸಲಾಯಿತು.
0 Comments