ಕಲ್ಲಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ವನಮಹೋತ್ಸವ, ಸನ್ಮಾನ

ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆ : ಸರಕಾರಿ ಉನ್ನತೀಕರಿಸಿದ ಜಿ.ಪಂ.ಮಾ.ಹಿ.ಪ್ರಾ.ಶಾಲೆ ಕಲ್ಲಬೆಟ್ಟು ಇಲ್ಲಿ ಇನ್ನರ್‌ವೀಲ್ ಕ್ಲಬ್ ಸಹಯೋಗದೊಂದಿಗೆ ಉಚಿತ ಪುಸ್ತಕ, ಕಲಿಕಾ ಚೇತರಿಕೆ  ಹಾಳೆಗಳ ವಿತರಣೆ, ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವನಮಹೋತ್ಸವ ಹಾಗೂ ಇನ್ನರ್‌ವೀಲ್ ಕ್ಲಬ್‌ನ ಅಧ್ಯಕ್ಷೆ ಸಹನಾ ನಾಗರಾಜ್ ಅವರಿಗೆ ಸನ್ಮಾನ ಕಾರ್ಯಕ್ರಮವು ಸೋಮವಾರ ನಡೆಯಿತು.

 ಇನ್ನರ್‌ವೀಲ್ ಕ್ಲಬ್ ಪ್ರಾಯೋಜಕತ್ವ ನೀಡಿರುವ  ಕಲಿಕಾ ಚೇತರಿಕೆ  ಹಾಳೆಗಳನ್ನು  ಇನ್ನರ್‌ವೀಲ್ ಕ್ಲಬ್  ಅಧ್ಯಕ್ಷೆ ಸಹನಾ ನಾಗರಾಜ್ ಅವರು ಶಾಲೆಗೆ ಹಸ್ತಾಂತರಿಸಿ ಮತ್ತು ಉಚಿತ ಪುಸ್ತಕವನ್ನು ವಿತರಿಸಿ ಮಾತನಾಡಿ, ಸರಕಾರಿ ಶಾಲಾ ಮಕ್ಕಳಿಗೆ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ಸಹಕಾರ ನೀಡುತ್ತಿರುವುದಕ್ಕೆ ಮತ್ತು ಮಕ್ಕಳ ಜತೆ ಬೆರೆಯಲು ಸಂತಸ ನೀಡುತ್ತದೆ. ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆದು ಸಮಾಜ ಮೆಚ್ಚುವಂತಹ ಕೆಲಸಗಳನ್ನು ಮಾಡಬೇಕೆಂದು ಸಲಹೆ ನೀಡಿದರು. 

  ಪುರಸಭಾ ಸದಸ್ಯ ಜೊಸ್ಸಿ ಮಿನೇಜಸ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು. 

ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ, ಕಾರ್ಯದರ್ಶಿಯಾಗಿ ಕಳೆದ ಮೂರು ವರ್ಷಗಳಿಂದ  ಶಾಲೆಗೆ ಸಹಕಾರ ನೀಡುತ್ತಾ ಬಂದಿರುವ ಸಹನಾ ನಾಗರಾಜ್ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು. 

 ನಂತರ ಇನ್ನರ್‌ವೀಲ್ ಕ್ಲಬ್‌ನ ನಿಯೋಜಿತ ಅಧ್ಯಕ್ಷೆ ರಮ್ಯಾ ವಿಕಾಸ್ ಮತ್ತು ಕಾರ್ಯದರ್ಶಿ ಸ್ವಾತಿ ಬೋರ್ಕರ್ ಅವರು ಶಾಲಾ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು. 

 ಇನ್ನರ್‌ವೀಲ್ ಕ್ಲಬ್‌ನ ನಿರ್ಗಮನ ಕಾರ್ಯದರ್ಶಿ ಸರಿತಾ ಆಶೀರ್ವಾದ್ ಉಪಸ್ಥಿತರಿದ್ದರು. 

  ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ಆಚಾರ್ಯ ಸ್ವಾಗತಿಸಿದರು. ಶಾಲಾ ಮುಖ್ಯ ಶಿಕ್ಷಕಿ ಮಾರ್ಗರೇಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿನಿಫ್ರೆಡ್ ಗ್ರೇಸಿ ಪಿಂಟೋ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ವಿಮಲಾ ವಂದಿಸಿದರು.

Post a Comment

0 Comments