ನಿಗಮ ಮಂಡಳಿಗಳ ಅಧ್ಯಕ್ಷರ ಗೇಟ್ ಪಾಸ್ ಬೆನ್ನಲ್ಲೇ ರಾಜ್ಯದ 12 ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರ ವಜಾ!

ಜಾಹೀರಾತು/Advertisment
ಜಾಹೀರಾತು/Advertisment

 

ಬೆಂಗಳೂರು: ನಿಗಮ ಮಂಡಳಿಗಳ ಅಧ್ಯಕ್ಷರನ್ನು ವಜಾಗೊಳಿಸಿದ ಬೆನ್ನಲ್ಲೇ ಇದೀಗ ರಾಜ್ಯದ 12 ವಿವಿಧ ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರ ನಾಮ ನಿರ್ದೇಶನವನ್ನು ರದ್ದುಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್ ವಿ ರಾಜೀವ್, ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಲಾಟ ಮೂರ್ತಿ, ಚಾಮರಾಜನಗರ ಪ್ರಾಧಿಕಾರದ ಅಧ್ಯಕ್ಷ ಪಿ.ಬಿ ಶಾಂತಮೂರ್ತಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್ ರಮೇಶ್ ಹೊಳ್ಳ ,ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ,ಕೆಜಿಎಫ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಅಶ್ವಿನಿ,

ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ್ ಪುಂಡಲೀಕ, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಶೋಕ್ ಜೀರೆ, ಚಿಕ್ಕಮಗಳೂರು ಪ್ರಾಧಿಕಾರದ ಅಧ್ಯಕ್ಷ ಸಿ.ಆನಂದ, ಬಾಗಲಕೋಟೆ ಪ್ರಾಧಿಕಾರದ ಅಧ್ಯಕ್ಷ ಬಸವಲಿಂಗಪ್ಪ ಕಾಶಿನಾಥ ನಾವಲಗಿ, ಕಲಬುರ್ಗಿ ಪ್ರಾಧಿಕಾರದ ಅಧ್ಯಕ್ಷ ದಯಾಘನ್ ಪ್ರಹ್ಲಾದರಾವ್ ಧಾರವಾಡಕರ್ ಸೇರಿದಂತೆ ಒಟ್ಟು 12 ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರುಗಳ ನಾಮನಿರ್ದೇಶನವನ್ನು ರದ್ದುಗೊಳಿಸಿ ಸರಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.


Post a Comment

0 Comments