ನಿನ್ನೆ 8.30 ಸಮಯ ಎಂದಿನಂತೆ ಕೋಳಿ ಅಂಗಡಿ ಮುಚ್ಚುತ್ತಿದ್ದ ವೇಳೆ ಅಲ್ಲಿಗೆ ಬಂದ ಕೇರಳ ನೋಂದಣಿಯ 1678 ಸಂಖ್ಯೆಯ ಸ್ಲೆಂಡರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಹರಿತವಾದ ಆಯುಧದಿಂದ ತಲೆ ಹಾಗೂ ಕುತ್ತಿಗೆಗೆ ಹೊಡೆದಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಈ ವೇಳೆ ಸ್ವಲ್ಪ ದೂರದವರೆಗೆ ಪ್ರವೀಣ್ ಓಡಿಹೋಗಿ ಕುಸಿದು ಬಿದ್ದಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲಿದ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಲೇ ಗಂಭೀರ ಗಾಯಗೊಂಡಿದ್ದ ಪ್ರವೀಣ್ ಸಾವನ್ನಪ್ಪಿದ್ದಾರೆ.
0 Comments