ಮಂಗಳೂರು: ದ.ಕ.ಜಿಲ್ಲೆಯ ಶಾಲಾ - ಕಾಲೇಜುಗಳಿಗೆ 2 ದಿನಗಳ ರಜೆ

ಜಾಹೀರಾತು/Advertisment
ಜಾಹೀರಾತು/Advertisment

 

ಮಂಗಳೂರು: ನಿರಂತರವಾಗಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ.ಕ.ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಎರಡು ದಿನಗಳ ರಜೆ ನೀಡಲಾಗಿದೆ.

ಕರಾವಳಿಯಾದ್ಯಂತ ಮಳೆಯ ಬಿರುಸು ಅಧಿಕವಾಗಿದೆ. ಹವಾಮಾನ ಇಲಾಖೆ ಜುಲೈ 9ರ ಬೆಳಗ್ಗೆ 8.30 ರವರೆಗೆ ರೆಡ್ ಅಲರ್ಟ್ ಅನ್ನು ಘೋಷಿಸಿದೆ.

ಈ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲಾ, ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೊಮಾಗಳಿಗೆ ಎರಡು ದಿನಗಳ ಕಾಲ ರಜೆ ಘೋಷಿಸಿ

ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Post a Comment

0 Comments