ಸಮಾಜ ಸೇವೆ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಅಗ್ರಗಣ್ಯ ಸಾಧನೆ ಮಾಡಿರುವ ಶ್ರೀನಿವಾಸ ಕ್ರಶರ್ ಮಾಲೀಕರು ಹಾಗೂ ರಾಜ್ಯ ಕ್ವಾರಿ ಅಸೋಶಿಯೇಶನ್‍ನ ಅಧ್ಯಕ್ಷರಾದ ಶ್ರೀ ರವೀಂದ್ರ ಶೆಟ್ಟಿಯವರಿಗೆ ಬೋರುಗುಡ್ಡೆ ಶ್ರೀ ಸತ್ಯನಾರಾಯಣ ದೇವಸ್ಥಾನದಲ್ಲಿ ಸನ್ಮಾನ ಮಾಡಲಾಯಿತು.
ಬೋರುಗುಡ್ಡೆ ಶ್ರೀ ಸತ್ಯನಾರಾಯಣ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ನೂತನ ಅಧ್ಯಕ್ಷರಾಗಿಯೂ ಆಯ್ಕೆಯಾಗಿದ್ದ ರವೀಂದ್ರ ಶೆಟ್ಟಿಯವರಿಗೆ ಸಮಿತಿಯ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಅನೇಕ ದೇವಾಯಲ, ದೈವಸ್ಥಾನಗಳನ್ನು ಜೀಣೋದ್ಧಾರಗೊಳಿಸಿದ್ದ ಕೀರ್ತಿ ಇವರಿಗೆ ಸಲ್ಲುತ್ತದೆ. ಅನೇಕ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ಸಮಾಜಮುಖಿ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದ ಇವರಿಗೆ ಇತ್ತೀಚೆಗೆ ಏಷಿಯಾ ವೇದಿಕೆ ಕಲ್ಚರಲ್ ರಿಸರ್ಚ್ ಯೂನಿವರ್ಸಿಟಿಯಿಂದ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿತ್ತು.




0 Comments