ಕೇಂದ್ರ ಸರ್ಕಾರದಿಂದ ರಾಜ್ಯಸಭೆಗೆ ನಾಮ ನಿರ್ದೇಶನ ಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಇಂದು ದೆಹಲಿಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ಮುನಿಸ್ವಾಮಿ ಸ್ವಾಗತಿಸಿದರು. ಈ ವೇಳೆ ಉಭಯ ಸಂಸದರೂ ಚಪ್ಪಲಿಗಳನ್ನು ಪಕ್ಕದಲ್ಲಿರಿಸಿ ಪೂಜ್ಯರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರೂ ಚಪ್ಪಲಿ ಕಳಚಿ ಸಂಸದರ ಜೊತೆಯಾಗಿದ್ದು ವಿಶೇಷವಾಗಿತ್ತು.
ಪೂಜ್ಯರು ಹಾಗೂ ಸಂಸದರ ಈ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಇದು ನಮ್ಮ ಸಂಸ್ಕಾರ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದಾರೆ.
0 Comments