ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಲಾಗಿದ್ದು ಕೊಚ್ಚಿ ಕೊಲೆ ಮಾಡಲಾಗಿದೆ. ಇಂದು ಸಂಜೆ ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿಯಲ್ಲಿ ಗುರುತಿಸಿಕೊಂಡು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದ ಹಾಗೂ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಪ್ರವೀಣ್ ನೆಟ್ಟಾರ್ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದು ಆಸ್ಪತ್ರೆಗೆ ರವಾನಿಸಿದ್ದರೂ ದಾಳಿಯ ತೀವ್ರತೆಗೆ ಪ್ರವೀಣ್ ನೆಟ್ಟಾರ್ ಕೊನೆಯುಸಿರೆಳೆದಿದ್ದಾರೆ. ಹತ್ಯೆಗೆ ಕಾರಣ ಏನು ಎಂದು ಇನ್ನಷ್ಟೇ ತಿಳಿದುಬರಬೇಕಿದೆ. ಈತ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾದ ಕಾರ್ಯಕಾರಣಿ ಸಮಿತಿಯ ಸದಸ್ಯನಾಗಿದ್ದು ಈತನ ಕೊಲೆಯ ಹಿಂದೆ ಪ್ರತೀಕಾರದ ಶಂಕೆಯಿದೆ ಎನ್ನಲಾಗುತ್ತಿದೆ.
0 Comments