ಮುಂದುವರಿದ ಹತ್ಯೆ: ಮಂಗಳೂರಿನ ಸುರತ್ಕಲಿನಲ್ಲಿ ಮುಸ್ಲಿಂ ಯುವಕನ ಮರ್ಡರ್:ಮತ್ತೋರ್ವನ ಸ್ಥಿತಿ ಗಂಭೀರ

ಜಾಹೀರಾತು/Advertisment
ಜಾಹೀರಾತು/Advertisment


 ಸುರತ್ಕಲ್ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಬಳಿಕ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ವೇಳೆಯೇ ಅದೇ ಜಿಲ್ಲೆಯಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಸುರತ್ಕಲ್ ನಲ್ಲಿ ಗುರುವಾರ ರಾತ್ರಿ ಯುವಕನೊಬ್ಬನ ಮೇಲೆ ಮಾರಕಾಯುಧಗಳಿಂದ ದಾಳಿ ಮಾಡಲಾಗಿದ್ದು ಓರ್ವ ಸಾವನ್ನಪ್ಪಿದ್ದು ಮತ್ತೋರ್ವ ಗಂಭೀರ ಸ್ಥಿತಿಯಲ್ಲಿದ್ದಾನೆ.

ಮಂಗಳ ಪೇಟೆಯ ವಾಝಿಲ್ ಎಂಬ ಯುವಕನ ಮೇಲೆ ತಲವಾರು ದಾಳಿ ನಡೆಸಲಾಗಿದೆ. ಚಪ್ಪಲಿ ಖರೀದಿಗೆ ಬಂದಿದ್ದ ವಾಝಿಯ ಮೇಲೆ ಅಂಗಡಿಯ ಎದುರಿನ ಜಗಲಿಯಲ್ಲೇ ತಲವಾರಿನಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದರು ಸಾಧ್ಯವಾಗಲಿಲ್ಲ.

ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.

Post a Comment

0 Comments