ಶಿಕಾರಿಪುರ ಕ್ಷೇತ್ರವನ್ನು ಬಿಟ್ಟುಕೊಟ್ಟ ಬಿಎಸ್‌ವೈ:ಮುಂದಿನ ಬಿಜೆಪಿ ಅಭ್ಯರ್ಥಿ ಘೋಷಿಸಿದ ಯಡಿಯೂರಪ್ಪ

ಜಾಹೀರಾತು/Advertisment
ಜಾಹೀರಾತು/Advertisment


 ನಿರಂತರವಾಗಿ ಶಿಕಾರಿಪುರ ಕ್ಷೇತ್ರದಿಂದ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದ ಬಿಜೆಪಿ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆಗೆ ನಿರಾಕರಿಸಿದ್ದಾರೆ. ಹಾಗೂ ತಾನು  ಸ್ಪರ್ಧಿಸುತ್ತಿದ್ದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರವನ್ನು ತನ್ನ ಪುತ್ರ ವಿಜಯೇಂದ್ರನಿಗೆ ಬಿಟ್ಟು ಕೊಟ್ಟಿದ್ದೇನೆ ಎನ್ನುವಂತಹ ಮಾತನ್ನು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶಿಕಾರಿಪುರದ ಮುಂದಿನ ಚುನಾವಣೆಗೆ ನಾನು ಸ್ಪರ್ಧಿಸುತ್ತಿಲ್ಲ ನನ್ನ ಮಗ ಬಿ.ವೈ. ವಿಜಯೇಂದ್ರ ನಿಗೆ ಶಿಕಾರಿಪುರ ಸ್ಥಾನವನ್ನು ಬಿಟ್ಟು ಕೊಡಲಿದ್ದೇನೆ. ಹಳೆ ಮೈಸೂರು ಭಾಗದಲ್ಲೂ ಅವನ ಸ್ಪರ್ಧೆಗೆ ಬೇಡಿಕೆಯಿದ್ದರೂ ತನ್ನ ತೆರವಿನಿಂದ ತಾನು ನಿಲ್ಲದ ಕಾರಣ ಶಿಕಾರಿಪುರಕ್ಕೆ ಸ್ಪರ್ಧಿಸುವಂತೆ ಸೂಚನೆ ನೀಡಿದ್ದೇನೆ ಇಂದು ಮಾಜಿ ಮುಖ್ಯಮಂತ್ರಿಗಳು ಹೇಳಿದ್ದಲ್ಲದೆ ತನಗಿಂತ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾನೆ ಎನ್ನುವಂತಹ ವಿಶ್ವಾಸವನ್ನು ವ್ಯಕ್ತಪಡಿಸಿದರು.

Post a Comment

0 Comments