ಪ್ರತಿಭಾ ಪುರಸ್ಕಾರ: ಸರ್ಕಾರಿ ನೌಕರರ ಸಂಘದಿಂದ ಆನ್‌ಲೈನ್ ಅರ್ಜಿ ಆಹ್ವಾನ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 


ರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ. 90ಕ್ಕಿಂತ ಹೆಚ್ಚು ಅಂಕಗಳಿಸಿದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಮಾತ್ರ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ. ವಿದ್ಯಾರ್ಥಿಯ ಹೆತ್ತವರು, ನಿಗಮ ಮಂಡಳಿ ಪ್ರಾಧಿಕಾರ ವಿಶ್ವವಿದ್ಯಾಲಯ, ಖಾಸಗಿ ಮತ್ತು ಅನುದಾನಿತ ವಿದ್ಯಾ ಸಂಸ್ಥೆಯ ನೌಕರರ ಮಕ್ಕಳಿಗೆ ಈ ಅವಕಾಶ ಇಲ್ಲ.

ಅರ್ಜಿ ಸಲ್ಲಿಸುವವರು ವಿದ್ಯಾರ್ಥಿಯ ಪಾಸುಪೋರ್ಟ್ ಅಳತೆಯ ಭಾವಚಿತ್ರ, ಅಂಕಪಟ್ಟಿ ಇಲಾಖೆಯ ಸೇವಾ ದೃಡೀಕರಣ ಪತ್ರ ಮತ್ತು ತಾಲೂಕು ಸಂಘದ ಅಧ್ಯಕ್ಷರ ದೃಢೀಕರಣ ಪತ್ರ ದಾಖಲಾತಿಯೊಂದಿಗೆ https://bitlyksgeaprathibapuraskara2022 ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿದೆ. ದೃಡೀಕರಣ ಪತ್ರ ಇಲ್ಲದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಮೂಡಬಿದಿರೆ ತಾಲೂಕು ಸಂಘದ ಅಧ್ಯಕ್ಷರಾದ ನಾಗೇಶ್ ಎಸ್. ಪ್ರಕಟಣೆಯಲ್ಲಿ ತಿಳಿಸಿದರು.

Post a Comment

0 Comments

Advertisement