ರಾಷ್ಟ್ರಪತಿ ಚುನಾವಣೆಗೆ ಎನ್.ಡಿ.ಎ. ಅಭ್ಯರ್ಥಿಯಾದ ಶ್ರೀಮತಿ ದ್ರೌಪದಿ ಮುರ್ಮುರವರು ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ರಾಷ್ಟ್ರಪತಿಯಾಗಿದ್ದ ಶ್ರೀ ರಾಮನಾಥ್ ಕೋವಿಂದ್ ರವರ ಆಡಳಿತ ಅವಧಿಯು ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಚುನಾವಣೆಯನ್ನು ನಡೆಸಲಾಗಿತ್ತು.
ಎನ್.ಡಿ.ಎ. ಅಭ್ಯರ್ಥಿಯಾಗಿ ಬಿಜೆಪಿಯ ದ್ರೌಪದಿ ಮುರ್ಮುರವರನ್ನು ಆಯ್ಕೆ ಮಾಡಲಾಗಿದ್ದು ಓರ್ವ ಬುಡಕಟ್ಟು ಮಹಿಳೆಯ ಆಯ್ಕೆ ಮೂಲಕ ಮಾಸ್ಟರ್ ಸ್ಟ್ರೋಕ್ ನೀಡಿತ್ತು. ಯುಪಿಎ ಅಭ್ಯರ್ಥಿಯಾಗಿ ಕಾಂಗ್ರೆಸ್ಸಿನ ಯಶ್ವಂತ್ ಸಿನ್ಹಾರವರನ್ನು ಆಯ್ಕೆ ಮಾಡಲಾಗಿತ್ತು. ಇದೀಗ ಫಲಿತಾಂಶ ಹೊರಬಿದ್ದಿದ್ದು ಬಿಜೆಪಿಯ ದ್ರೌಪದಿ ಮುರ್ಮುರವರು ಅತ್ಯಧಿಕ ಮತಗಳ ಅಂತರದಿಂದ ಗೆಲುವುದು ಸಾಧಿಸಿದ್ದಾರೆ. ಈ ಮೂಲಕ ಭಾರತದ ಬುಡಕಟ್ಟು ಮಹಿಳೆಯೋರ್ವರು ಪ್ರಥಮ ಬಾರಿಗೆ ದೇಶದ ಪ್ರಥಮ ಪ್ರಜೆಯಾಗಿ ಆಯ್ಕೆಯಾದಂತಾಗಿದೆ.
0 Comments