ಬಹುಕಾಲದ ಬೇಡಿಕೆಯಾದ ಅಳಿಯೂರು ಪದವಿಪೂರ್ವ ಕಾಲೇಜಿನ ಕನಸು ಈಡೇರಿದ್ದು ಶಾಸಕರಿಗೆ ಅಭಿನಂದನೆಯನ್ನು ಸಲ್ಲಿಸಲಾಯಿತು. ಕಳೆದ ಕೆಲ ವರ್ಷಗಳಿಂದ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಅಳಿಯೂರು ಪ್ರದೇಶದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ನಿರ್ಮಿಸುವಲ್ಲಿ ಅವಿರತ ಹೋರಾಟ ನಡೆಸಿ ಯಶಸ್ವಿಯಾದ ಮುಲ್ಕಿ- ಮೂಡುಬಿದರೆ ಕ್ಷೇತ್ರದ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಇವರಿಗೆ ಅಳಿಯೂರು ಪ್ರೌಢಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ ನೆರವೇರಿಸಲಾಯಿತು. ಅಕ್ಕರೆ ಕನ್ನಡ ಸಂಘ ಇದರ ವತಿಯಿಂದ ನಡೆದ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ದೇವರಾಜ್ ಇವರನ್ನು ಅಭಿನಂದಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕರು ಮೂಡುಬಿದಿರೆಯಲ್ಲಿ ಬಡವರು, ಮಧ್ಯಮ ವರ್ಗದವರು ಉಚಿತ ಶಿಕ್ಷಣವನ್ನು ಪಡೆಯುವುದು ನನ್ನ ಉದ್ದೇಶವಾಗಿದೆ. ಈ ಕಾರಣಕ್ಕಾಗಿ ನಾನು ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜು ತರುವಲ್ಲಿ ಹೋರಾಟ ನಡೆಸಿದ್ದೇನೆ ಅಳಿಯೂರಿಗೆ ಸದ್ಯಕ್ಕೆ ಕಲಾ (ಆರ್ಟ್ಸ್ ) ವಿಭಾಗ ಮಾತ್ರ ಬಂದಿದೆ ಮುಂದಿನ ದಿನಗಳಲ್ಲಿ ವಾಣಿಜ್ಯ ಹಾಗೂ ವಿಜ್ಞಾನ ವಿಭಾಗ ತರುವಲ್ಲಿ ಪ್ರಯತ್ನ ಮಾಡವೆವು ಹಾಗೂ ಇದರ ಜವಾಬ್ದಾರಿ ಹಾಗೂ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವ ಜವಾಬ್ದಾರಿಯನ್ನು ಗ್ರಾಮಸ್ಥರು ವಹಿಸಿಕೊಳ್ಳಬೇಕು ಎಂದು ಶಾಸಕರು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಗಳೊಂದಿಗೆ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಉಪನ್ಯಾಸಕರಾದ ಪ್ರವೀಣ್ ಪೂಜಾರಿ, ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಅನಿತಾ ಆಳ್ವ, ಮುಖ್ಯೋಪಾಧ್ಯಾಯರಾದ ಸುಬ್ರಹ್ಮಣ್ಯ ವಿ, ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಬಿ ಅಳಿಯೂರು, ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾದ ವೇಣುಗೋಪಾಲ್ ಶೆಟ್ಟಿ, ಶಿಕ್ಷಕರಾದ ರಾಮಕೃಷ್ಣ ಶಿರೂರು, ಸೌಮ್ಯ ಮೂಡುಬಿದಿರೆ, ಕಾರ್ಯಕ್ರಮದ ಆಯೋಜಕರಾದ ಮಹಾದೇವ ಮೂಡುಕೊಣಾಜೆ ಸಹಿತ ಇತರ ಗಣ್ಯರು ಉಪಸ್ಥಿತರಿದ್ದರು. ಸುನಿಲ್ ಪಣಪಿಲ ಕಾರ್ಯಕ್ರಮವನ್ನು ನಿರೂಪಿಸಿದರು.
0 Comments