ಪಠ್ಯದೊಂದಿಗೆ ಕ್ರೀಡೆಗೂ ಪ್ರೋತ್ಸಾಹ: ಮೂಡುಬಿದಿರೆ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ ಉದ್ಘಾಟಿಸಿದ ಶಾಸಕ ಕೋಟ್ಯಾನ್

ಜಾಹೀರಾತು/Advertisment
ಜಾಹೀರಾತು/Advertisment

 

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ಸೈಂಟ್ ಇಗ್ನೇಶಿಯಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಡಲಕೆರೆ ಇದರ ಜಂಟಿ ಆಶ್ರಯದಲ್ಲಿ 2022-23 ನೇ ಸಾಲಿನ ಪ್ರಾಥಮಿಕ  ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಕರಾಟೆ ಪಂದ್ಯಾಟವನ್ನು ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ರವರು ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಉಮಾನಾಥ್ ಕೋಟ್ಯಾನ್ ಕರಾಟೆ ಎಂಬುದು ಕೇವಲ ಒಂದು ಸ್ಪರ್ಧೆ ಮಾತ್ರವಲ್ಲ ಅದು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಿರುವ ಉತ್ತಮ ಸಾಧನವಾಗಿದೆ. ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಿಗೂ ಒತ್ತು ನೀಡುವ ಮೂಲಕ ದೈಹಿಕ ಸಾಮರ್ಥ್ಯ ವೃದ್ಧಿಗೊಳಿಸಬೇಕು ಎಂದು ಶಾಸಕರು ಕರೆ ನೀಡಿದರು.

 ಕಾರ್ಯಕ್ರಮದಲ್ಲಿ ಪುರಸಭಾ  ಅಧ್ಯಕ್ಷರಾದಂತಹ ಶ್ರೀ ಪ್ರಸಾದ್ ಕುಮಾರ್ ಸೈಂಟ್ ಇಗ್ನೇಶಿಯಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಡಲಕೆರೆ  ಇಲ್ಲಿಯ ಟ್ರಸ್ಟ್ ನ ಮುಖ್ಯಸ್ಥರಾದ ಶ್ರೀ ವಾಸುದೇವ ಭಟ್, ವಕೀಲರಾದ ಚೇತನ್ ಕುಮಾರ್ ಶೆಟ್ಟಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಮಕೃಷ್ಣ ಶಿರೂರು,  ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀನಾಗೇಶ್ , ಶಿಕ್ಷಣಾಧಿಕಾರಿಗಳ ಕಚೇರಿಯ ಅಧಿಕಾರಿಗಳಾದ ಶಿವಾನಂದ ಕಾಯ್ಕಿಣಿ ಹಾಗೂ ಇತರರು ಉಪಸ್ಥಿತರಿದ್ದರು.

Post a Comment

0 Comments