ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮೂಡುಬಿದಿರೆ ಪ್ರೆಸ್ ಕ್ಲಬ್‌ನ ಸ್ವಂತ ನಿವೇಶನದಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆಯನ್ನು ಮೂಡುಬಿದಿರೆ ಶಾಸಕ ಉಮಾನಾಥ ಎ. ಕೋಟ್ಯಾನ್ ಹಾಗೂ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ನೆರವೇರಿಸಿದರು.
ಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಸುದರ್ಶನ ಎಂ., ದ.ಕ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಮೂಡುಬಿದಿರೆ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ರೇಮಂಡ್ ಡಿಕುನ್ಹಾ ತಾಕೋಡೆ, ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ಆರ್. ಬಿ. ಜಗದೀಶ್, ಸಾಹಿತಿ, ಪತ್ರಕರ್ತ ಶೇಖರ್ ಅಜೆಕಾರು, ವಿಶ್ರಾಂತ ಪತ್ರಕರ್ತ ಸದಾನಂದ ಹೆಗಡೆಕಟ್ಟೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಮೂಡುಬಿದಿರೆ ಪತ್ರಕರ್ತರ ಸಂಘದ ಅಧ್ಯಕ್ಷ ವೇಣುಗೋಪಾಲ್, ಕಾರ್ಯದರ್ಶಿ ಶರತ್ ದೇವಾಡಿಗ, ಪದಾಧಿಕಾರಿಗಳು ಮತ್ತು ಸದಸ್ಯರು, ಗುತ್ತಿಗೆದಾರ ಕೃಷ್ಣರಾಜ್ ಮೂಡುಬಿದಿರೆ ಉಪಸ್ಥಿತರಿದ್ದರು.
ಅರ್ಚಕರಾದ ಶ್ರೀಕಾಂತ್ ಹೊಳ್ಳ ಪೂಜಾ ವಿಧಿವಿಧಾನ ನೆರವೇರಿಸಿದರು.
0 Comments