ಬೋರುಗುಡ್ಡೆ ಶ್ರೀ ಸತ್ಯನಾರಾಯಣ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ

ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆಯ ಶ್ರೀ ಸತ್ಯನಾರಾಯಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಂಕಲ್ಪಿಸಿದ್ದು ಜೀರ್ಣೋದ್ಧಾರ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಉಮನಾಥ್ ಕೋಟ್ಯಾನ್‍ರನ್ನು ಆಯ್ಕೆ ಮಾಡಲಾಗಿದ್ದು ಅಧ್ಯಕ್ಷರಾಗಿ ರಾಜ್ಯ ಕ್ವಾರಿ ಅಸೋಸಿಯೇಶನ್ ಇದರ ಅಧ್ಯಕ್ಷರಾದ ಶ್ರೀ ರವೀಂದ್ರ ಶೆಟ್ಟಿಯವರನ್ನು ಆಯ್ಕೆ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಯಾಗಿ ವಿಶ್ವನಾಥ್ ಕೋಟ್ಯಾನ್ ಹನ್ನೇರ್, ಉಪಾಧ್ಯಕ್ಷರಾಗಿ ಶ್ರೀಮತಿ ಭಾನುಮತಿ ಶೀನಪ್ಪ, ಶಿವ ಎಲ್.ಪೂಜಾರಿ ಹಾಗೂ ಇತರರನ್ನು ಆಯ್ಕೆ ಮಾಡಲಾಗಿದೆ.ಕೋಶಾಧಿಕಾರಿಯಾಗಿ ವಸಂತ್ ಕುಲಾಲ್ ಮತ್ತು ಇತರೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಇನ್ನು ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ಸತ್ಯನಾರಾಯಣ ತಂತ್ರಿಗಳು ಸೇರಿದಂತೆ ಗ್ರಾಮದ ಹಿರಿಯರನ್ನು ಗೌರವ ಸಲಹೆಗಾರರಾಗಿ ಆಯ್ಕೆ ಮಾಡಲಾಗಿದೆ.

ಹಲವಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಈ ದೇವಸ್ಥಾನದಲ್ಲಿ 1997ರಲ್ಲಿ ಜೀಣೋದ್ಧಾರ ನಡೆದಿತ್ತು. ಅದರ ನಂತರ ಇದೇ ಮೊದಲ ಬಾರಿಗೆ ಜೀರ್ಣೋದ್ಧಾರಕ್ಕೆ ಗ್ರಾಮಸ್ಥರು ಮುಂದಾಗಿದ್ದು ಈ ಬಗ್ಗೆ ಸಮಿತಿಯನ್ನು ರಚಿಸಲಾಗಿದೆ. ಶಿಲಾಮಯ ಗರ್ಭಗುಡಿ, ಸುತ್ತುಪೌಳಿ ಸೇರಿದಂತೆ ಅನೇಕ ಸಾನಿಧ್ಯಗಳನ್ನು ನಿರ್ಮಿಸುವ ಸಂಕಲ್ಪವನ್ನು ಹೊಂದಿದ್ದೇವೆ ಎಂದು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.

Post a Comment

0 Comments