ಹೆಗ್ಗಡೆಯವರನ್ನು ಸ್ವಾಗತಿಸಲೆಂದೇ ದೆಹಲಿಗೆ ತೆರಳಿದ್ದ ಬೆಳ್ತಂಗಡಿ ಬಿಜೆಪಿ ತಂಡ:ವಿಮಾನ ನಿಲ್ದಾಣದಲ್ಲಿ ಶಾಸಕರು, ಬಿಜೆಪಿ ಅಧ್ಯಕ್ಷರಿಂದ ಸ್ವಾಗತ

ಜಾಹೀರಾತು/Advertisment
ಜಾಹೀರಾತು/Advertisment

 

ಕೇಂದ್ರ ಸರ್ಕಾರದಿಂದ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಇಂದು ದೆಹಲಿಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಸ್ವಾಗತಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ರಾಜ್ಯಸಭೆಗೆ ಪ್ರಮಾಣವಚನ ಸ್ವೀಕರಿಸಲು ದೆಹಲಿಗೆ ಆಗಮಿಸಿದ್ದು ಈ ಸಂದರ್ಭದಲ್ಲಿ ದೆಹಲಿಯ ವಿಮಾನ ನಿಲ್ದಾಣದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಶ್ರೀ ಹರೀಶ್ ಪೂಂಜ, ಬೆಳ್ತಂಗಡಿ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್,ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಗಣೇಶ್ ಗೌಡ ನವೂರ್,ಶ್ರೀ ಶ್ರೀನಿವಾಸ ರಾವ್ ಧರ್ಮಸ್ಥಳ ಅವರು ಸ್ವಾಗತಿಸಿದರು.

Post a Comment

0 Comments