ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು ಈ ಹತ್ಯೆಯನ್ನು ಖಂಡಿಸಿ ಚಿಕ್ಕಮಗಳೂರು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಸಂದೀಪ್ ಹರವಿನಂಗಡಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಷ್ ಚಂದ್ರ ಪಕ್ಷಕ್ಕೆ ತಮ್ಮ ಜವಾಬ್ದಾರಿಗೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಸಂದೀಪ್ ಹರವಿನಂಗಡಿ ಹಾಗೂ ಪ್ರಧಾನ ಕಾರ್ಯದರ್ಶಿ ಸುಭಾಷ್ ಚಂದ್ರ ಅವರು ತಮ್ಮ ವರಿಷ್ಠರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದು ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.ಹಿಂದೂ ಕಾರ್ಯಕರ್ತರ ಹತ್ಯೆಯ ಬಗ್ಗೆ ಸರ್ಕಾರವು ನಿರ್ಲಕ್ಷ್ಯ ತೋರುತ್ತಿದ್ದು ಒಂದು ಕ್ಷಣವು ತಾವು ಈ ಹುದ್ದೆಯಲ್ಲಿ ಮುಂದುವರೆಯುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಬಿಜೆಪಿ ಸರ್ಕಾರಕ್ಕೆ ಹಾಗೂ ಬಿಜೆಪಿ ನಾಯಕರಿಗೆ ತಲುಪಿಸಿದ್ದಾರೆ.
0 Comments