ಕೋಟ ಚಿಂತನೆಗೆ ಭರ್ಜರಿ ರೆಸ್ಪಾನ್ಸ್:ಕರ್ನಾಟಕದಲ್ಲಿ ಯಶಸ್ಸಿನ ಪಥದತ್ತ ಅಗ್ನಿಪಥ.!


ಜಾಹೀರಾತು/Advertisment
ಜಾಹೀರಾತು/Advertisment

ಕೇಂದ್ರದ ಅಗ್ನಿಪಥ್ ಯೋಜನೆಗೆ ಪೂರಕವಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ದೇಶದ ಸೇನೆಗೆ ಸೇರುವವರಿಗೆ ಸೂಕ್ತ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಇದಕ್ಕೆ ರಾಜ್ಯಾದ್ಯಂತ 754ಕ್ಕೂ ಅಧಿಕ ಮಂದಿ ಹೆಸರು ನೋಂದಾಯಿಸಿದ್ದಾರೆ.

ಸೇನಾ ಪೂರ್ವ ತರಬೇತಿಗಾಗಿ ಸಮಾಜ ಕಲ್ಯಾಣ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀರರಾಣಿ ಅಬ್ಬಕ್ಕ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ, ಉಡುಪಿ ಜಿಲ್ಲೆಯಲ್ಲಿ ಕೋಟಿ-ಚೆನ್ನಯ್ಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ, ಕಾರವಾರದಲ್ಲಿ ವೀರ ಬಹುದ್ದೂರ್ ಹೇಂಜ ನಾಯ್ಕ್ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ ಆರಂಭಿಸಲು ನಿರ್ಧರಿಸಿದೆ. ಇದಕ್ಕೆ ಮಂಗಳೂರಿನ ಕದ್ರಿಯ ಕರ್ನಾಟಕ ಪಾಲಿಟೆಕ್ನಿಕ್ ನಲ್ಲಿ, ಉಡುಪಿಯ ಕೋಟೇಶ್ವರ ಐಟಿಐ ಕಾಲೇಜಿನಲ್ಲಿ,ಉತ್ತರ ಕರ್ನಾಟಕದ ಕಾರವಾರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಥಳ ಗುರುತಿಸಲಾಗಿದೆ ಎಂದು ದಕ್ಷಿಣ ಕನ್ನಡ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಿದ್ದಲಿಂಗೇಶ್ ಬೇವಿನಮಟ್ಟಿ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರದ ಅಗ್ನಿಪಥ್ ಯೋಜನೆಗೆ ಪೂರಕವಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಸೇನೆ ಸೇರುವವರಿಗೆ ದಕ್ಷಿಣಕನ್ನಡ, ಉಡುಪಿ, ಕಾರವಾರದಲ್ಲಿ ವಿಶೇಷ ತರಬೇತಿ ಶಾಲೆ ತೆರೆಯಲು ಉದ್ದೇಶಿಸಲಾಗಿದ್ದು, ರಾಜ್ಯಾದ್ಯಂತ 700 ಕ್ಕೂ ಅಧಿಕ ಅರ್ಜಿಗಳು ಬಂದಿವೆ. ಈ ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಊಟ ವಸತಿ ಸಂಪೂರ್ಣ ಉಚಿತವಾಗಿದೆ ಎಂದು ತಿಳಿಸಿದ್ದಾರೆ

Post a Comment

0 Comments