ಎಕ್ಸಲೆಂಟ್ ಮೂಡಬಿದಿರೆಯಲ್ಲಿ ಸಂಭ್ರಮದ ಸ್ವಾತಂತ್ರ್ಸೋತ್ಸವ ಆಚರಣೆ

ಜಾಹೀರಾತು/Advertisment
ಜಾಹೀರಾತು/Advertisment

 

ಮೂಡಬಿದಿರೆ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 75ನೇ ವರ್ಷದ ಸ್ವಾತಂತ್ರ್ಸೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಮೂಲ್ಕಿ-ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಉಮಾನಾಥ ಕೋಟ್ಯಾನ್ ಮುಖ್ಯ ಅತಿಥಿಯಾಗಿ ಆಗಮಿಸಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು.

ದೇಶಾದ್ಯಂತ ಜಾತಿ ಮತಧರ್ಮ ಭೇದವಿಲ್ಲದೆ ಎಲ್ಲರೂ ಆಚರಿಸುವ ಹಬ್ಬ ಸ್ವಾತಂತ್ರ್ಸೋತ್ಸವ ಅದರಲ್ಲಿಯೂ ಈ ವರ್ಷಇನ್ನೂ ವಿಶೇಷವಾಗಿ ನಾವೆಲ್ಲರೂ ಸ್ವಾತಂತ್ರ್ಯದ ಅಮೃತಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದೇವೆ. ಈ ಸಂದರ್ಭದಲ್ಲಿ ದೇಶದ ಸ್ವಾಂತತ್ರ್ಯಕ್ಕಾಗಿ ಹೋರಾಡಿದ ವೀರರ ಹಾಗೂ ಹಿರಿಯರತ್ಯಾಗ ಬಲಿದಾನಗಳನ್ನು ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ. ಅವರ ಹೋರಾಟದ ಛಲದಿಂದಾಗಿ ನಾವಿಂದು ಸ್ವಾತಂತ್ರ್ಯ ಭಾರತದಲ್ಲಿ ಇದ್ದೇವೆ. ವಿದ್ಯಾರ್ಥಿಗಳು ಭವಿಷ್ಯದ ಭವ್ಯ ಭಾರತದ ಕಣ್ಮಣಿಗಳು ಎಂದು ಹೇಳುತ್ತಾ ಯುವಜನಾಂಗದೇಶದ ಪ್ರಗತಿಯಲ್ಲಿ ಒಂದಾಗಬೇಕು ಎಂದು ಸ್ವಾತಂತ್ರ್ಯೋತ್ಸವದ ಸಂದೇಶದಲ್ಲಿ ಹೇಳಿದರು.

ಎನ್‌ಸಿಸಿ, ರೋವರ್ಸ್ ಮತ್ತು ರೇಂಜರ್ಸ್ ಇವರಿಂದ ಪಥಸಂಚಲನ ನಡೆದು ಅತಿಥಿಗಳಿಗೆ ಗೌರವರಕ್ಷೆ ನೀಡಲಾಯಿತು. ಸ್ವಾತಂತ್ರ್ಸೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಮನೆ ಮನೆಯ ಮೇಲೆ ತ್ರಿವರ್ಣಧ್ವಜ ಕಾರ್ಯಕ್ರಮದಡಿಯಲ್ಲಿ ಸಂಸ್ಥೆಯ ವತಿಯಿಂದ ವಿತರಿಸಿದ ಬಾವುಟಗಳನ್ನು ಎಲ್ಲಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ತಮ್ಮ ಮನೆಯಲ್ಲಿ ಹಾರಿಸಿ ಸಂಭ್ರಮಿಸಿದ ಕ್ಷಣವನ್ನು ಭಿತ್ತರಿಸಲಾಯಿತು.

ಎಲ್ಲಾ ಬೋಧಕ ಮತ್ತು ಬೋಧಕೇತರ ವರ್ಗದವರಿಗೆ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಛದ್ಮವೇಷ ಸ್ಪರ್ಧೆಯನ್ನು ಆಯೋಜಿಸಲಾಯಿತು ಹಾಗೂ ಪುರಸಭೆಯವರು ಹಮ್ಮಿಕೊಂಡಿದ್ದ ಸ್ವಾತಂತ್ರ್ಸೋತ್ಸವದ ನಡಿಗೆ ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿದರು.

ಸಮಾರಂಭದಲ್ಲಿ ಕರ್ನಾಟಕ ಸರಕಾರದ ಮಾಜಿ ಸಚಿವರು ಹಾಗೂ ಎಕ್ಸಲೆಂಟ್ ವಿದ್ಯಾ ಸಂಸ್ಥೆಯ ಗೌರವಾಧ್ಯಕ್ಷರಾದ ಅಭಯಚಂದ್ರ ಜೈನ್, ಮೂಡಬಿದಿರೆಯ ತಹಶೀಲ್ದಾರ್ ಸಚ್ಚಿದಾನಂದ ಸತ್ಯಪ್ಪಕುಚನೂರ್, ಪುರಸಭೆಯ ಉಪಾಧ್ಯಕ್ಷೆ ಶ್ರೀಮತಿ ಸುಜಾತ ಶಶಿಧರ್, ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ್‌ಕುಮಾರ್ ಶೆಟ್ಟಿ, ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಉಪನ್ಯಾಸಕ ತೇಜಸ್ವಿ ಭಟ್ ನಿರೂಪಿಸಿ ನಿರ್ವಹಿಸಿದರು. ಕಾರ್ಯಕ್ರಮದ ನಂತರ ಸಿಹಿ ತಿಂಡಿಗಳನ್ನು ವಿತರಿಸಲಾಯಿತು.


Post a Comment

0 Comments