ಮೂಡುಬಿದಿರೆಪುರಸಭೆ ವತಿಯಿಂದ ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂಭ್ರಮ

ಜಾಹೀರಾತು/Advertisment
ಜಾಹೀರಾತು/Advertisment

 

ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂಭ್ರಮ ಮೂಡುಬಿದಿರೆ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಈ ಸ್ವಾಭಿಮಾನವನ್ನು ಮೈಗೂಡಿಸಿಕೊಳ್ಳ ಬೇಕು: "ಹಕ್ಕುಗಳಿಗೆ ಹೊರಾಡುವದರ ಜೊತೆಗೆ ದೇಶಕ್ಕಾಗಿ ನಮ್ಮ ಕರ್ತವ್ಯಗಳನ್ನು ಪಾಲಿಸುವ ಬದ್ಧತೆ ಇರಬೇಕು. ಹಾಗೂ ತಮ್ಮಲ್ಲಿರುವ ಸಾಮರ್ಥ್ಯವನ್ನು, ದೇಶ ಕಟ್ಟುವುದಕ್ಕೆ ಬಳಸಿಕೊಳ್ಳಬೇಕು ಎಂದು ದ.ಕ ಯೋಜನಾ ನಿರ್ದೇಶಕ ಅಭಿಷೇಕ್‌ ವಿ.ಬಿ ಹೇಳಿದರು.

ದೇಶದ ಸ್ವಾತಂತ್ರ, ಅಮೃತಮಹೋತ್ಸವ ಅಂಗವಾಗಿ ಪುರಸಭೆಯ ವತಿಯಿಂದ ಅಮೃತಭಾರತಿಗೆ ಕನ್ನಡದಾರತಿ ಅಭಿಯಾನದ ಅಂಗವಾಗಿ ಸೈಟ್ಸ್-ಗೈಡ್ ಕನ್ನಡ ಭವನದಲ್ಲಿ ಶನಿವಾರ ನಡೆದ ವಿವಿಧ ಕಾರ್ಯಕ್ರಮಗಳ ಸಮಾರೋಪ ಹಾಗೂ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಯುವರಾಜ್‌ ಜೈನ್ ಮಾತನಾಡಿ, ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಮಾನವೀಯ ಮೌಲ್ಯಗಳು, ಸ್ವಚ್ಛತೆಯ ಪರಿಕಲ್ಪನೆ, ರಾಷ್ಟ್ರಾಭಿಮಾನದ ಸಾರಗಳಿದಲ್ಲಿ ಭಾರತ ವಿಶ್ವಗುರು ಆಗುವುದರಲ್ಲಿ ಸಂಶಯವಿಲ್ಲ ಎಂದರು.

ಪುರಸಭೆ ಅಧ್ಯಕ್ಷ ಪ್ರಸಾದ್‌ ಕುಮಾರ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಕಲ ಬಂಧನಗಳಿಂದ ನಮ್ಮನ್ನು ಬಿಡುಗಡೆಗೊಳಿಸುವುದೇ ವಿದ್ಯೆ, ನಮಗೆ ಸಂಸ್ಕಾರ ಸಿಕ್ಕಿದರೆ ದೇಶಕ್ಕೆ ಸಂಸ್ಕಾರ ಸಿಕ್ಕಿದಂತಾಗುತ್ತದೆ. ನಾವು ಧ್ವಜವನ್ನು ನಮ್ಮ ನೆಲವನ್ನು, ಮಣ್ಣನ್ನು ಪ್ರೀತಿಸಿದಷ್ಟು ನಮ್ಮ ದೇಶ ಬಲಿಷ್ಠವಾಗುತ್ತದೆ ಎಂದು ಹೇಳಿದರು.
ಉಪಾಧ್ಯಕ್ಷೆ ಸುಜಾತ ಶಶಿಧರ್, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಮಹಾವೀರ ಪಿಯು ಕಾಲೇಜಿನ ಪ್ರಾಂಶುಪಾಲ ರಮೇಶ್‌ ಭಟ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ರಾಜಶ್ರೀ ಬಿ., ವಾರ್ಡ್ ಸದಸ್ಯ ರಾಜೇಶ್ ನಾಯ್ಕ, ಪುರಸಭೆ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು. 
ಮುಖ್ಯಾಧಿಕಾರಿ ಇಂದು ಎಂ. ಸ್ವಾಗತಿಸಿದರು. ಪರಿಸರ ಅಭಿಯಂತರ ಶಿಲ್ಪಾ ಎಸ್‌.
ಕಾರ್ಯಕ್ರಮ ನಿರೂಪಿಸಿದರು. ಎಂಜಿನಿಯರ್ ಪದ್ಮನಾಭ ವಂದಿಸಿದರು.

Post a Comment

0 Comments