ಕೋಟಿ ಚೆನ್ನಯ ಸೇನಾ ತರಬೇತಿ ಶಾಲೆಯ ಉದ್ಘಾಟನೆಗೆ ಮುಹೂರ್ತ ಫಿಕ್ಸ್:ಕೆಂದ್ರ ಸಚಿವರಿಂದಲೇ ಉದ್ಘಾಟನೆ

ಜಾಹೀರಾತು/Advertisment
ಜಾಹೀರಾತು/Advertisment

 

ರಾಜ್ಯದ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಡೆಸಲ್ಪಡುವ ಅಗ್ನಿಪಥ್ ಗೆ ಪೂರಕ ಕೋಟಿ ಚೆನ್ನಯ್ಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯ ಉದ್ಘಾಟನಾ ಸಮಾರಂಭ ದಿನಾಂಕ 05.09.2022 ರಂದು ಮಧ್ಯಾಹ್ನ 2:30 ಕ್ಕೆ ನಡೆಯಲಿದೆ.


ಉಡುಪಿಯ ಶೇಷಶಯನ ಸಭಾಂಗಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕೋಟಿ-ಚೆನ್ನಯ್ಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯನ್ನು ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್ ಅವರು ನೆರವೇರಿಸಲಿದ್ದಾರೆ. ಹಾಗೂ ಮತ್ತೋರ್ವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಅರ್ಹ ಅಭ್ಯರ್ಥಿಗಳಿಗೆ ಅರ್ಹತಾ ಪತ್ರವನ್ನು ವಿತರಿಸಲಿದ್ದಾರೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಅಗ್ನಿಪಥ್ ಗೆ ಪೂರಕವಾಗಿ ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಉಡುಪಿ ಜಿಲ್ಲೆಯಲ್ಲಿ ಕೋಟಿ-ಚೆನ್ನಯ ಹೆಸರಿನಲ್ಲಿ, ಮಂಗಳೂರಿನಲ್ಲಿ ರಾಣಿ ಅಬ್ಬಕ್ಕಳ ಹೆಸರಿನಲ್ಲಿ ಮತ್ತು ಉತ್ತರ ಕನ್ನಡದಲ್ಲಿ ಹೇಂಜ ನಾಯ್ಕ್ ಹೆಸರಿನಲ್ಲಿ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯು ನಿರ್ವಹಿಸಲ್ಪಡುತ್ತದೆ.

Post a Comment

0 Comments