ಸ್ವಾತಂತ್ರ್ಯ ಭಾರತದ ಅಮೃತ ಮಹೋತ್ಸವ ಹಿನ್ನೆಲೆ ಮೂಡುಬಿದಿರೆ ಪುರಸಭೆ ವತಿಯಿಂದ ತ್ರಿವರ್ಣ ಜಾಥಾ

ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆ: ಸ್ವಾತಂತ್ರ್ಯ ಭಾರತದ ಅಮೃತ ಮಹೋತ್ಸವದ ಅಂಗವಾಗಿ ಅಮೃತ ಭಾರತಿಗೆ ಕನ್ನಡದಾರತಿ ಅಭಿಮಾನದ ಅಂಗವಾಗಿ ಪುರಸಭೆಯ ವತಿಯಿಂದ ಪುರಸಭೆಯಿಂದ ಕನ್ನಡ ಭವನದವರೆಗೆ ತ್ರಿವರ್ಣಧ್ವಜದೊಂದಿಗೆ ಜಾಥಾ ನಡೆಯಿತು.

 ಶಾಸಕ ಉಮಾನಾಥ ಕೋಟ್ಯಾನ್ ಜಾಥಾಕ್ಕೆ ಪುರಸಭೆಯ ಆವರಣದಲ್ಲಿ ಚಾಲನೆ ನೀಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂಮೋಹನ್ ಆಳ್ವ,

ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಉಪಾಧ್ಯಕ್ಷೆ ಸುಜಾತ ಶಶಿಕಿರಣ್, ಮುಖ್ಯಾಧಿಕಾರಿ ಇಂದು ಎಂ, ಪರಿಸರ ಅಭಿಯಂತರೆ ಶಿಲ್ಪಾ, ಎಂಜಿನಿಯರ್ ಪದ್ಮನಾಭ ಮತ್ತಿತರರು ಈಸಂದರ್ಭದಲ್ಲಿದ್ದರು.

ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು, ರೋಟರಿ ಕ್ಲಬ್, ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷರು ಮತ್ತು ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಮತ್ತು ಸಿಬಂಧಿಗಳು, ಪುರಸಭೆಯ ಸದಸ್ಯರು ಮತ್ತು ಸಿಬ್ಬಂದಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.



Post a Comment

0 Comments