ದ್ವಿಚಕ್ರ ವಾಹನ ಸವಾರರೇ,ಎಡಿಜಿಪಿ ಹೊಸ ಆದೇಶ ಗಮನಿಸಿ:ಒಂದು ವಾರ ಈ ನಿಯಮ ಪಾಲನೆ ಕಡ್ಡಾಯ

ಜಾಹೀರಾತು/Advertisment
ಜಾಹೀರಾತು/Advertisment


 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ತಪ್ಪಿಸುವ ಸಲುವಾಗಿ ವಾಹನ ಸವಾರರಿಗೆ ಹೊಸ ನಿಯಮವನ್ನು ಎಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಇತ್ತೀಚೆಗೆ ನಡೆದ ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಹಾಗೂ ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆಯ ಬಳಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯ ಬಗ್ಗೆ ಕ್ರಮ ಕೈಗೊಳ್ಳಲು ಇದು ಅನಿವಾರ್ಯ ಎಂಬುದನ್ನು ಎಡಿಜಿಪಿ ಹೇಳುದ್ದಾರೆ.

ಈ ನಿಟ್ಟಿನಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹಿಂಬದಿ ಸವಾರರಿಗೆ ಅವಕಾಶವನ್ನು ನಿರಾಕರಿಸಲಾಗಿದ್ದು ಹೊಸ ನಿಯಮವನ್ನು ಜಾರಿಗೊಳಿಸಲಾಗಿದೆ. ಹಿರಿಯ ನಾಗರಿಕರಿಗೆ ಮತ್ತು ಮಹಿಳೆ ಮಕ್ಕಳಿಗೆ ಈ ನಿಯಮ ಅನ್ವಯಿಸುವುದಿಲ್ಲ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ನಿಯಮವನ್ನು ಜಾರಿಗೊಳಿಸಲಾಗಿದ್ದು 18 ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ಇದರಲ್ಲಿ ರಿಯಾಯಿತಿ ಕೊಡಲಾಗಿದೆ. ಪುರುಷ ಸಿಬ್ಬಂದಿ ಅಥವಾ ವಿದ್ಯಾರ್ಥಿಗಳು ಸಹಿತವಾಗಿ ಯಾವುದೇ ಪುರುಷರು ಹಿಂಬದಿ ಸವಾರರಾಗಿ ಪ್ರಯಾಣಿಸುವಂತಿಲ್ಲ ಎಂಬ ಆದೇಶ ಹೊರಡಿಸಲಾಗಿದೆ. ಒಂದು ವಾರದ ಮಟ್ಟಿಗೆ ಈ ನಿಯಮಪಾಲನೆ ಆಗಲೇಬೇಕು ಎಂಬ ಕಟ್ಟುನಿಟ್ಟಿನ ಕ್ರಮವನ್ನು ಎಡಿಜಿಪಿ ಅಲೋಕ್ ಆದೇಶಿಸಿದ್ದಾರೆ.

Post a Comment

0 Comments