ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ನಡೆದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತಕ್ಕೆ ಕಂಚು ಗಳಿಸಿಕೊಟ್ಟ ಕರಾವಳಿ ಹುಡುಗ ಕುಂದಾಪುರ ಮೂಲದ ಗುರುರಾಜ್ ಪೂಜಾರಿ ಅವರು ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು ಈ ಸಂದರ್ಭದಲ್ಲಿ ಅವರಿಗೆ ಭವ್ಯ ಸ್ವಾಗತ ದೊರೆಯಿತು.
ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ಮುಲ್ಕಿ ಮೂಡುಬಿದಿರೆ ವಿಧಾನಸಭಾ ಶಾಸಕರಾದ ಉಮಾನಾಥ್ ಕೋಟ್ಯಾನ್ ಹಾಗೂ ಇತರರು ಅದ್ದೂರಿಯಾಗಿ ಸ್ವಾಗತಿಸಿದರು.
0 Comments