ಬಂಟರ ಸಂಘ ಮೂಡುಬಿದಿರೆ ಇದರ ವತಿಯಿಂದ ನಡೆದ ಬಂಟ ಸಮಾಜ ಬಾಂಧವರ ಸಭೆ ಹಾಗೂ ಬಂಟ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ಸಮಾರಂಭವು ಇಂದು ನಡೆಯಿತು. ಶಾಸಕರಾದ ಉಮಾನಾಥ್ ಕೋಟ್ಯಾನ್ ರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನವನ್ನು ವಿತರಿಸಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಬಂಟ ಸಾಧಕರನ್ನು ಅಭಿನಂದಿಸಲಾಯಿತು. ಸಮಾರಂಭದಲ್ಲಿ ಮಾಜಿ ಸಚಿವರಾದ ಕೆ.ಅಭಯಚಂದ್ರ ಜೈನ್, ಕೆಎಂಎಫ್ ಡೈರಿಯ ಅಧ್ಯಕ್ಷರಾದ ಸುಚರಿತ ಶೆಟ್ಟಿ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸುದರ್ಶನ್ ಮೂಡುಬಿದಿರೆ, ಯುವ ಕಾಂಗ್ರೆಸ್ ನಾಯಕರಾದ ಮಿಥುನ್ ರೈ , ಪಂಚರತ್ನ ಹೋಟೆಲ್ ಮಾಲೀಕರಾದ ತಿಮ್ಮಯ್ಯ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.
0 Comments