ಪೆನ್ನು ಮಾರಾಟ ಮಾಡುವ ಮಕ್ಕಳ ಬಗ್ಗೆ ತನಿಖೆ ನಡೆಸುವಂತೆ ಮೂಡುಬಿದಿರೆ ಪುರಸಭೆ ಒತ್ತಾಯ-ಕೂಡಲೇ ಕಾರ್ಯಪ್ರವೃತರಾದ ಪೊಲೀಸರು

ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆ : ಮೂಡುಬಿದಿರೆ ಪೇಟೆಯಲ್ಲಿ ಸಣ್ಣ ಮಕ್ಕಳು ಮತ್ತು ಮಕ್ಕಳು ಪೆನ್ನು ಮಾರಾಟ ಮಾಡುತ್ತಿದ್ದಾರೆ. ಮಹಿಳೆಯರ ಕಂಕುಳಲ್ಲಿ ಪುಟ್ಟ ಪುಟ್ಟ ಮಕ್ಕಳಿದ್ದು ಅವರು ನಿದ್ರಾ ಸ್ಥಿತಿಯಲ್ಲಿಯೇ ಇರುತ್ತಾರೆ ಈ ಬಗ್ಗೆ ತನಿಖೆ ನಡೆಸುವಂತೆ  ಮೂಡುಬಿದಿರೆ ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಸೋಮವಾರ ಪುರಸಭಾ ಸಭಾಂಗಣದಲ್ಲಿ ನಡೆದ ವಿಶೇಷ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದರು.

ತಕ್ಷಣ ಕಾರ್ಯಪ್ರವೃತರಾದ ಪೊಲೀಸರು  ಪೇಟೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಪೆನ್ನು ಮಾರಾಟ ಮಾಡುತ್ತಿರುವ ಬಗ್ಗೆ ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಅಧಿಕಾರಿ ದಿವಾಕರ ರೈ ಅವರು ತಕ್ಷಣ ಕಾರ್ಯಪ್ರವೃತರಾಗಿ ಮಹಿಳೆಯರು ಮತ್ತು ಮಕ್ಕಳನ್ನು ಹುಡುಕಿ ಠಾಣೆಗೆ ಕರೆದುಕೊಂಡು ಹೋಗಿ ತನಿಖೆ ನಡೆಸಿ ಎಚ್ಚರಿಕೆ ನೀಡಿದ್ದಾರೆ.

Post a Comment

0 Comments