ಭಾರತದ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರು ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿಗೆ ಆಗಮಿಸಲಿದ್ದು ಈ ಸಂದರ್ಭದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಗೋಲ್ಡ್ ಫಿಂಚ್ ಮೈದಾನದಲ್ಲಿ ಬೃಹತ್ ಸಮಾವೇಶದಲ್ಲಿ ಭಾಷಣ ನಡೆಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರ ಸರ್ಕಾರದಿಂದ ಬಿಡುಗಡೆಗೊಂಡಿರುವ ಎನ್ಎಂಪಿಟಿ (ನ್ಯೂ ಮಂಗಳೂರು ಪೋರ್ಟ್ ರಸ್ತೆ )ಯನ್ನು ಸಹಿತ ಅನೇಕ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮುತುವರ್ಜಿಯಿಂದ ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದ ವಿಶೇಷ ಅನುದಾನಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭವನ್ನು ನರೇಂದ್ರ ಮೋದಿಯವರು ಅಂದು ನಡೆಸಲಿದ್ದಾರೆ ಎಂದು ಸಂಸದರು ಮಾಹಿತಿ ನೀಡಿದ್ದಾರೆ.
0 Comments