ಕೇಂದ್ರ ಸರ್ಕಾರದಿಂದ ರಾಜ್ಯಸಭೆಗೆ ನಾಮನಿರ್ದೇಶನ ಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೂತನ ಸಂಸದರ ಕಾರ್ಯಾಲಯವು ಇಂದು ಧರ್ಮಸ್ಥಳದಲ್ಲಿ ಲೋಕಾರ್ಪಣೆಗೊಂಡಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಧರ್ಮಸ್ಥಳದ ಹರ್ಷೇಂದ್ರ ಡಿ ಹೆಗ್ಗಡೆ ಸಹಿತ ಅನೇಕ ಗಣ್ಯರ ಉಪಸ್ಥಿತಿಯಲ್ಲಿ ನೂತನ ಕಛೇರಿಯು ಉದ್ಘಾಟನೆ ಗೊಂಡಿತ್ತು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ ಅವರು ಪೂಜ್ಯ ಹೆಗ್ಗಡೆಯವರಿಗೆ ರಕ್ಷೆಯನ್ನು ಕಟ್ಟುವ ಮೂಲಕ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದರು.
0 Comments