ಶಿವಮೊಗ್ಗ: ಕ್ರಾಂತಿಕಾರಿ ವೀರ್ ಸಾವರ್ಕರ್ ಫೋಟೋ ವಿವಾದ ಪ್ರಕರಣದಲ್ಲಿ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಕೆಲ ದೇಶ ವಿರೋಧಿ ಚಿಂತನೆಯ ಮತಾಂಧರು ಇಬ್ಬರು ಹಿಂದೂಗಳಿಗೆ ಚೂರಿಯಿಂದ ಇರಿದಿದ್ದರು. ಅದರಲ್ಲಿ ಗಾಂಧಿ ಬಜಾರ್ ನಲ್ಲಿ ಪ್ರೇಮ್ ಸಿಂಗ್ ಯುವಕನಿಗೆ ಚಾಕು ಇರಿಯಲಾಗಿತ್ತು. ಇದೀಗ ಈ ಪ್ರಕರಣದ ಪ್ರಮುಖ ಆರೋಪಿಗೆ ಪೊಲೀಸರು ಫೈರಿಂಗ್ ಮಾಡಿ ಬಂಧಿಸಿದ್ದಾರೆ.
ಚೂರಿ ಇರಿತದ ಪ್ರಮುಖ ಆರೋಪಿ ಮಾರ್ನಾಮಿಬೈಲ್ ನ ಜಬೀವುಲ್ಲಾ ಮೇಲೆ ಪೊಲೀಸರ ಫೈರಿಂಗ್ ಮಾಡಿರೋ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯಲ್ಲಿ ತಡರಾತ್ರಿ ನಡೆದಿದೆ. ತೀರ್ಥಹಳ್ಳಿ ರಸ್ತೆಯ ನಮೋ ಶಂಕರ ಲೇಔಟ್ ನಲ್ಲಿ ಪೊಲೀಸರು ಫೈರಿಂಗ್ ನಡೆಸಿದ್ದಾರೆ.
ಚಾಕು ಇರಿತ ಪ್ರಕರಣ ಸಂಬಂಧ ಈಗಾಗಲೇ ಶಿವಮೊಗ್ಗ ಜೆಸಿ ನಗರದ ನದೀಮ್ (25) ಹಾಗೂ ಬುದ್ಧ ನಗರದ ಅಬ್ದುಲ್ ರೆಹಮಾನ್ (25) ನನ್ನು ಬಂಧಿಸಲಾಗಿದೆ. ಮತ್ತಿಬ್ಬರ ಬಂಧನಕ್ಕೆ ಪೊಲೀಸರಿಂದ ಕಾರ್ಯಾಚರಣೆ ಮುಂದುವರಿದಿದೆ. ಪ್ರಮುಖ ಆರೋಪಿ ಜಬೀವುಲ್ಲಾನನ್ನು ತಡರಾತ್ರಿ ಫೈರಿಂಗ್ ಮಾಡಿ ಬಂಧಿಸಲಾಗಿದೆ.
ಜಬೀವುಲ್ಲಾ ಬಂಧನಕ್ಕೆ ತೆರಳಿದ ವೇಳೆ ಪೊಲೀಸರ ಮೇಲೆಯೇ ಜಬೀವುಲ್ಲಾ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಜಬೀವುಲ್ಲಾ ಕಾಲಿಗೆ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಕುರಿ ಫೈರ್ ಮಾಡಿದ್ದಾರೆ. ಗಾಯಗೊಂಡ ಜಬೀವುಲ್ಲಾನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
0 Comments