ಬೆಂಗಳೂರು : ಮೊದಲ ಹಂತದಲ್ಲಿ 11 ಸಾವಿರ ಪೌರಕಾರ್ಮಿಕರ ನೇಮಕಾತಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಇಂದು ನಗರದಲ್ಲಿ ಪೌರ ಕಾರ್ಮಿಕರ ಜೊತೆ ಉಪಹಾರ ಸೇವಿಸಿ ನಂತರ ಮಾತನಾಡಿದ ಸಿಎಂ, ಮೊದಲ ಹಂತದಲ್ಲಿ 11 ಸಾವಿರ ಪೌರ ಕಾರ್ಮಿಕರ ನೇಮಕ ಮಾಡಲಾಗುತ್ತದೆ. ನಂತರ ಇನ್ನುಳಿದ ಕಾರ್ಮಿಕ ಖಾಯಂ ನೇಮಕ ಮಾಡಲಾಗುತ್ತದೆ. ಮುಖ್ಯಮಂತ್ರಿಯಾಗಿ ನಾನು ನನ್ನ ಕರ್ತವ್ಯ ಮಾಡಿದ್ದೇನೆ, ಅವರ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ, ಶೀಘ್ರ ಪೌರ ಕಾರ್ಮಿಕರ ಖಾಯಂ ಬಗ್ಗೆ ಕ್ರಮ ಕೈಗೊಳ್ಳಲಿದ್ದೇನೆ ಎಂದು ಹೇಳಿದರು.
ಈ ಕುರಿತು ಟ್ವಿಟ್ ಮಾಡಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಪೌರಕಾರ್ಮಿಕರಿಗೆ ಸಂಬಂಧಿಸಿದಂತೆ ಐಡಿಪಿ ಸಾಲಪ್ಪ ವರದಿ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ. ಕಳೆದ ಸಂಪುಟ ಸಭೆಯಲ್ಲಿ 11 ಸಾವಿರ ಪೌರಕಾರ್ಮಿಕರ ಸೇವೆ ಕಾಯಂಗೆ ತೀರ್ಮಾನಿಸಲಾಗಿತ್ತು. ಇನ್ನೂ 43 ಸಾವಿರ ಜನರು ಬಾಕಿ ಇದ್ದು, ಅವರ ಸೇವೆ ಕಾಯಂಗೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು..
0 Comments