ಕಳೆದ ತಿಂಗಳು ಮತಾಂಧರಿಂದ ಹತ್ಯೆಗೊಳಗಾದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಮುಖಂಡನಾದ ಪ್ರವೀಣ್ ನೆಟ್ಟಾರ್ ಆತನ ಕುಟುಂಬದವರಿಗೆ ಒಬ್ಬರಿಗೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಉದ್ಯೋಗ ದೊರಕಿಸಿಕೊಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶ ನೀಡಿದ್ದಾರೆ. ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ನಡೆಯುವ ಬಿಜೆಪಿ ಸರ್ಕಾರದ ಸಾಧನಾ ಸಮಾವೇಶ ಜನಸ್ಪಂದನ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ನಮ್ಮ ಕಾರ್ಯಕರ್ತರ ಹತ್ಯೆಯನ್ನು ನಾವು ಸಹಿಸುವುದಿಲ್ಲ ಮತ್ತು ಅವರ ಕುಟುಂಬದ ಜೊತೆಗೆ ನಾವು ಸದಾ ಕಾಲ ಜೊತೆಯಾಗಿರುತ್ತೇವೆ. ಈ ಹಿನ್ನಲೆಯಲ್ಲಿ ಅವರ ಬೇಡಿಕೆಯಂತೆ ಅವರ ಕುಟುಂಬದ ಒಬ್ಬರಿಗೆ ನನ್ನ ಕಚೇರಿಯಲ್ಲಿ ಉದ್ಯೋಗ ದೊರಕಿಸುವ ಬಗ್ಗೆ ಈಗಿಂದಲೇ ಆದೇಶ ಹೊರಡಿಸುತ್ತಿದ್ದೇನೆ ಎಂದು ಘೋಷಿಸಿದ್ದಾರೆ. ಪ್ರವೀಣ್ ನೆಟ್ಟಾರ್ ಹತ್ಯೆ ಬಳಿಕ ಅವರ ಕುಟುಂಬದ ಬೇಡಿಕೆಯಾದ ಸರ್ಕಾರಿ ಉದ್ಯೋಗದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ಈ ಘೋಷಣೆಯನ್ನು ಘೋಷಿಸಿದ್ದು ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಮಾತ್ರವಲ್ಲದೆ ಬಿಜೆಪಿ ಕಾರ್ಯಕರ್ತರ ಮುಖದಲ್ಲಿ ಸಂತಸವನ್ನು ಮೂಡಿದೆ.
0 Comments