ನಳಿನ್ ಕುಮಾರ್‌ಗೆ ಮೋದಿ ಶಹಬ್ಬಾಶ್.! ಸರ್ಕಾರಿ ಕಾರ್ಯಕ್ರಮಕ್ಕೆ ಈ ರೀತಿಯ ಜನ ಅಚ್ಚರಿ ಮೂಡಿಸಿದೆ ಎಂದ ನಮೋ

ಜಾಹೀರಾತು/Advertisment
ಜಾಹೀರಾತು/Advertisment

 

ರಾಜಕೀಯ ಕಾರ್ಯಕ್ರಮಕ್ಕೆ ಅಥವಾ ರಾಜಕೀಯ ಸಮಾವೇಶಗಳಿಗೆ ಜನ ಸೇರುವುದು ಸಾಮಾನ್ಯ ಆದರೆ ಸರ್ಕಾರಿ ಕಾರ್ಯಕ್ರಮವೊಂದಕ್ಕೆ ಲಕ್ಷಾಂತರ ಜನ ಸೇರಿರುವುದು ಅಚ್ಚರಿಯನ್ನು ಮೂಡಿಸಿದೆ ಎಂದು ಹೇಳಿದ್ದಾರೆ. ಸಮಾವೇಶ ಮುಗಿದ ಬಳಿಕ ನಡೆದ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಸರ್ಕಾರಿ ಕಾರ್ಯಕ್ರಮವೊಂದಕ್ಕೆ ಇಷ್ಟೊಂದು ಸಂಖ್ಯೆಯ ಜನ ಸೇರಿರುವುದು ಅಚ್ಚರಿ ಮೂಡಿಸಿದೆ. ಕೇವಲ ಹತ್ತೇ ದಿನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿ ಯಶಸ್ವಿಗೊಳಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಅವರ ತಂಡಕ್ಕೆ ಶಹಬ್ಬಾಶ್ ಗಿರಿ ನೀಡಿದ್ದಾರೆ ಎನ್ನಲಾಗಿದೆ. ಕೇವಲ ಹತ್ತೇ ದಿನದಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿ ನಿರೀಕ್ಷೆಗೂ ಮೀರಿ ಜನರನ್ನು ತಲುಪಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ತಂಡಗಳಿಗೆ ನರೇಂದ್ರ ಮೋದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಮಾತ್ರವಲ್ಲದೆ ಪ್ರತಿ ತಿಂಗಳು ನಾನು ಕರ್ನಾಟಕಕ್ಕೆ ಭೇಟಿ ನೀಡುವೆ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಲುಪಿಸಿ ಎಂದು ರಾಜ್ಯ ನಾಯಕರಿಗೆ ನಮೋ ಕಿವಿಮಾತು ಹೇಳಿದ್ದಾರೆ ಎಂದು ತಿಳಿದುಬಂದಿದೆ.

Post a Comment

0 Comments