2022-23 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಮೂಡುಬಿದಿರೆ ತಾಲೂಕಿನ ಅಳಿಯೂರು ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಾದ ಶ್ರೀ ಸುಬ್ರಹ್ಮಣ್ಯ ವಿ ಇವರು ಆಯ್ಕೆಯಾಗಿದ್ದಾರೆ. ಸೆಪ್ಟೆಂಬರ್ 5 ರಂದು ಕೊಡಲ್ಪಡುವ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಈ ಬಾರಿ ಅನೇಕ ಮಂದಿ ಆಯ್ಕೆಯಾಗಿದ್ದು ಅದರಲ್ಲಿ ಮೂಡುಬಿದಿರೆಯ ಅಳಿಯೂರು ಪ್ರೌಢಶಾಲಾ ಶಿಕ್ಷಕ ಸುಬ್ರಹ್ಮಣ್ಯ ವಿ ಇವರೂ ಆಯ್ಕೆಯಾಗಿದ್ದಾರೆ. ಪಠ್ಯದ ಜೊತೆಗೆ ಮಕ್ಕಳನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ಹೇಗೆ ತಯಾರಿಸುವುದು ಎಂಬ ತರಬೇತಿ ನಡೆಸಿ ಅನೇಕ ಮಕ್ಕಳಿಗೆ ವಿದ್ಯಾರ್ಥಿವೇತನ ಸಿಗುವಂತೆ ಮಾಡಿದ ಖ್ಯಾತಿ ಇವರದ್ದು. ಮಾತ್ರವಲ್ಲದೆ ಮುನ್ನೂರಕ್ಕೂ ಅಧಿಕ ವಿದ್ಯಾರ್ಥಿಗಳಿರುವ ಅಳಿಯೂರು ಪ್ರೌಢಶಾಲೆಯಲ್ಲಿ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸುತ್ತಿರುವ ಇವರು ಓರ್ವ ಶ್ರೇಷ್ಠ ವಿಜ್ಞಾನ ಶಿಕ್ಷಕ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಉತ್ತಮ ಪ್ರಯೋಗಾಲಯವನ್ನು ತಯಾರಿಸಿದ ಇವರು ಅನೇಕ ಕಾರ್ಯಕ್ರಮಗಳನ್ನು ನಡೆಸಿ ಮಕ್ಕಳನ್ನು ಪಠ್ಯದ ಜೊತೆಗೆ ಪಠ್ಯೇತರರಾಗಿಯೂ ಬೆಳೆಯುವಂತೆ ಮಾಡಿದ್ದಾರೆ. ಇಂತಹ ಶಿಕ್ಷಕರಿಗೆ ಈ ಬಾರಿಯ ಅತ್ಯುತ್ತಮ ಜಿಲ್ಲಾ ಶಿಕ್ಷಕ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ.
0 Comments