ನಮೋ ಜನ್ಮದಿನ: ರಕ್ತದಾನ ಶಿಬಿರ ಉದ್ಘಾಟಿಸಿದ ಶಾಸಕ ಭರತ್ ಶೆಟ್ಟಿ


 ಬಿಜೆಪಿ ಯುವಮೋರ್ಚಾ ಮಂಗಳೂರು ನಗರ ಉತ್ತರ ಮಂಡಲ ಆಯೋಜಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀಯವರ 72ನೇ ಜನ್ಮದಿನದ ಅಂಗವಾಗಿ ಬೃಹತ್ ರಕ್ತದಾನ ಶಿಬಿರವನ್ನು ಶಾಸಕರಾದ ಡಾ.ಭರತ್ ಶೆಟ್ಟಿಯವರು ಉದ್ಘಾಟಿಸಿದರು.

ಇದೇ ಶಿಬಿರದಲ್ಲಿ ನಾಗರಿಕರಿಗೆ

ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ( ABHA ) ನೋಂದಣಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.


160 ಕ್ಕೂ ಮಿಕ್ಕಿ ನಾಗರಿಕರು ಶಿಬಿರದಲ್ಲಿ ರಕ್ತದಾನ ಮಾಡಿದರು. 100 ಕ್ಕೂ ಹೆಚ್ಚಿನ ಜನರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ನೋಂದಣಿ ಮಾಡಲಾಯಿತು. ಇದೇ ಸಂದರ್ಭದಲ್ಲಿ 12 ಜನರು ಅಂಗಾಗ ದಾನ ಪ್ರಮಾಣ ಪತ್ರಕ್ಕೆ ಸಹಿ ಹಾಕಿದರು.


ಕಾವೂರು ಸೊಸೈಟಿ ಹಾಲ್ ನಲ್ಲಿ ನಡೆದ ಶಿಬಿರದಲ್ಲಿ ಮೇಯರ್ ಜಯಾನಂದ ಅಂಚನ್, ಭಾಜಪಾ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ, ಮಂಡಲ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ಯುವಮೋರ್ಚಾ ಅಧ್ಯಕ್ಷರಾದ ಭರತರಾಜ್ ಕೃಷ್ಣಾಪುರ, ಯುವಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ವೇತ ಪೂಜಾರಿ,ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸಂಜಿತ್ ಶೆಟ್ಟಿ, ಸಂದೇಶ್ ಜಿ.ಕೆ. ಹಾಗೂ ವಿವಿಧ ಮೋರ್ಚಾ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Post a Comment

0 Comments

Advertisement