ಮೂಡುಬಿದಿರೆ: ಸಮುದಾಯ ಆರೋಗ್ಯ ಕೇಂದ್ರ ಮೂಡುಬಿದಿರೆ ವತಿಯಿಂದ ಕಲ್ಲಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಆಯುಷ್ಮಾನ್/ಅಭಾ ಕಾಡ್ ೯ ನೋಂದಾಣಿ ಕಾರ್ಯಕ್ರಮವು ಶನಿವಾರ ನಡೆಯಿತು.
ಪುರಸಭಾ ಸದಸ್ಯ ಜೊಸ್ಸಿ ಮಿನೇಜಸ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಿದಾಗ ಸದೃಢವಾದ ಕುಟುಂಬ ನಿರ್ವಹಣೆ ಸಾಧ್ಯ. ಕೊರೋನಾವು ನಮ್ಮಲ್ಲಿ ಬದುಕಿನ ಬಗ್ಗೆ ಜಾಗೃತಿ ಮೂಡಿಸಿದೆ. ಗ್ರಾಮೀಣ ಮಟ್ಟದಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಪರಿಸರ ಜನರಿಗೆ ಉಪಯೋಗವಾಗುತ್ತದೆ ಎಂದರು.
ಪುರಸಭೆಯ ಮಾಜಿ ಅಧ್ಯಕ್ಷ ಸುಂದರ, ಕಲ್ಲಬೆಟ್ಟು ಶಾಲೆಯ ಮುಖ್ಯ ಶಿಕ್ಷಕಿ ಮಾರ್ಗರೇಟ್,ಸಮುದಾಯ ಆರೋಗ್ಯ ಅಧಿಕಾರಿಗಳಾದ ಸೋಮನಾಥ, ಅನ್ನಪೂರ್ಣ,ಅಂಗನವಾಡಿ ಸಹಾಯಕಿ ಸುಜಾತ ಉಪಸ್ಥಿತರಿದ್ದರು.
ಕಲ್ಲಬೆಟ್ಟು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ರೇಖಾ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಗಿರಿಜಾ ವಂದಿಸಿದರು.
0 Comments