ಯಶಸ್ವಿನಿ ಯೋಜನೆ ಮರು ಜಾರಿ ಸರ್ಕಾರ ಆದೇಶ: ನ 01 ರಿಂದ ಸದಸ್ಯರ ನೋಂದಣಿ ಪ್ರಾರಂಭ

ಜಾಹೀರಾತು/Advertisment
ಜಾಹೀರಾತು/Advertisment

 


ಬೆಂಗಳೂರು: ಯಶಸ್ವಿನಿ ಜಾರಿ ಪರಿಷ್ಕರಿಸಿ ಮರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನವೆಂಬರ್ 1 ರಿಂದ ಸದಸ್ಯರ ನೋಂದಣಿ ಪ್ರಾರಂಭವಾಗಲಿದೆ.

ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮೀಣ ಪ್ರದೇಶದ ಸಹಕಾರಿ ಸಂಘಗಳ ಸದಸ್ಯರಿಗೆ ನಾಲ್ಕು ಜನರ ಕುಟುಂಬಕ್ಕೆ ತಲಾ 500 ರೂ. ಹಾಗೂ ನಗರ ಪ್ರದೇಶದ ಸಹಕಾರಿಗಳಿಗೆ 1000 ರೂ. ದರ ನಿಗದಿಪಡಿಸಲಾಗಿದೆ. ನಾಲ್ಕು ಮಂದಿಗಿಂತ ಹೆಚ್ಚಿನ ಸದಸ್ಯರು ಇರುವ ಕುಟುಂಬಗಳಿಗೆ ಹೆಚ್ಚುವರಿ ಸದಸ್ಯರಿಗೆ ತಲಾ 200 ರೂ. ಸ್ವೀಕರಿಸಿ, ನೊಂದಾಯಿಸಬಹುದು.2022-23ನೇ ಸಾಲಿನ ಆವಿಷ್ಕಾರದಲ್ಲಿ ಮುಖ್ಯಮಂತ್ರಿಯವರು ಯಶಸ್ವಿನಿ ಯೋಜನೆ ರಾಜ್ಯದಲ್ಲಿ ಮರು ಜಾರಿಗೊಳಿಸಲು ಘೋಷಿಸಿದ್ದರು. ಈ ಯೋಜನೆಯಡಿ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂ. ಪಡೆದಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದು. ರಾಜ್ಯ ಸರ್ಕಾರವು ಪ್ರಸಕ್ತ ಆಯವ್ಯಯದಲ್ಲಿ 300 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ.

ಈ ಹಿಂದೆ ಸಹಕಾರ ಇಲಾಖೆಯಲ್ಲಿ ಯಶಸ್ವಿ ಯೋಜನೆ 2003ರಲ್ಲಿ ಪ್ರಾರಂಭಿಸಿದ್ದು, 2003-04 ರಿಂದ 2017-18ರವರೆಗೆ ಜಾರಿಯಲ್ಲಿತ್ತು. ನಂತರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ವರ್ಗಾವಣೆಗೊಂಡಿದ್ದು, 2018, ಮೇ 31 ರಿಂದ ಈ ಯೋಜನೆಯು ಸ್ಥಗಿತಗೊಂಡಿತ್ತು. 2018ರ ಜೂನ್ 1 ರಿಂದ ಆರೋಗ್ಯ ಕರ್ನಾಟಕ ಯೋಜನೆಯೊಂದಿಗೆ ವಿಲೀನಗೊಂಡಿತ್ತು.ಈ ಯೋಜನೆ 'ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್' ಮೂಲಕ ಅನುಷ್ಠಾನಗೊಳಿಸಲಾಗಿದೆ. ಸರ್ಕಾರದ ಪ್ರಧಾನ ಕಾರ್ಯದರ್ಶಿ, ಸಹಕಾರ ಇಲಾಖೆ ಇವರು ಟ್ರಸ್ಟ್‌ನ ಅಧ್ಯಕ್ಷರಾಗಿರುತ್ತಾರೆ. 2022-23ನೇ ಸಾಲಿಗೆ ಯಶಸ್ವಿ ಯೋಜನೆಯಡಿ ಸದಸ್ಯತ್ವ ನೋಂದಣಿ ಪ್ರಕ್ರಿಯೆ ನ. 01 ರಿಂದ ಪ್ರಾರಂಭಿಸಿ. ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗಿದೆ.

Post a Comment

0 Comments