ಹೌದು ! ಹೈ ಪ್ರೋಪೆಲ್ ಟಾರ್ಗೇಟ್ ಮಾಡ್ತಾ ಇದ್ದ ಆರೋಪಿ ಅರ್ಚನಾ ನಾಗ್, 18 ಶಾಸಕರು ಸೇರಿದಂತೆ 25 ಪ್ರಭಾವಿಗಳನ್ನು ತನ್ನ ಹನಿಟ್ರ್ಯಾಪ್ ಬಲೆಗೆ ಕಡೆವಿರುವುದಾಗಿ ಪೊಲೀಸ್ ತನಿಖೆ ವೇಳೆ ತಿಳಿದು ಬಂದಿದೆ.
ಈ ವಿಚಾರ ಇದೀಗ ಒಡಿಶಾ ರಾಜ್ಯ ರಾಜಕೀಯದಲ್ಲಿ ಭಾರಿ ತಲ್ಲಣ ಉಂಟು ಮಾಡಿದೆ. ಧಾಮ್‌ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೂ ಮುನ್ನವೇ ಈ ಸಂಗತಿ ಬೆಳಕಿಗೆ ಬಂದಿರುವುದು ರಾಜಕೀಯ ವಾತಾವರಣವನ್ನೇ ಕೆಡಿಸಿದೆ.
ಹನಿಟ್ರ್ಯಾಪ್‌ಗೆ ಒಳಗಾದ ಶಾಸಕರಲ್ಲಿ ಬಹುತೇಕರು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿ ಸರ್ಕಾರದ ಸದಸ್ಯರಾಗಿದ್ದಾರೆ.
ಸದ್ಯ ಅರ್ಚನಾಳನ್ನು ಬಂಧಿಸಿರುವ ಪೊಲೀಸರು ಒಂದು ವಾರ ಕಳೆದರೂ ಆಕೆಯ ವಿಚಾರಣೆಯನ್ನು ಯಾಕೆ ನಡೆಸಲಿಲ್ಲ ಎಂಬ ಪ್ರಶ್ನೆಗಳು ಚರ್ಚೆಗೆ ಗ್ರಾಸವಾಗಿದೆ. ಖಂಡಗಿರಿ ಪೊಲೀಸ್ ಠಾಣೆಯಲ್ಲಿ ಅರ್ಚನಾ ವಿರುದ್ಧ ಯುವತಿಯೊಬ್ಬಳು ದೂರು ದಾಖಲಿಸಿ, ಆಕೆಯ ಅಕ್ರಮ ವ್ಯವಹಾರದ ಬಗ್ಗೆ ತಿಳಿಸಿಕೊಟ್ಟರೂ ಸಹ ಪೊಲೀಸರು ತನಿಖೆ ಮಾಡಲು ಮತ್ತು ಸಿಆರ್‌ಪಿಸಿ ಸೆಕ್ಷನ್ 164ರ ಅಡಿಯಲ್ಲಿ ಹೇಳಿಕೆಯನ್ನು ದಾಖಲಿಸಲು ಯಾವುದೇ ಆಸಕ್ತಿ ತೋರಿಸಲಿಲ್ಲ ಎಂಬ ಅಂಶ ತಿಳಿದು ಬಂದಿದ್ದು ಹೈ ಪ್ರೋಫೈಲ್'ಗೆ ಗಾಳ ಹಾಕಿದ್ದ ಯುವತಿ ಕೇಸ್ ತನಿಖೆಯಲ್ಲೂ ಹೊಸ ಆಯಾಮ ಸೃಷ್ಟಿ ಮಾಡಿದೆ.
ಅರ್ಚನಾ ಮತ್ತು ಆಕೆಯ ಪತಿ ಜಗಬಂಧು ಚಂದ್ ಅವರು ಅನೇಕ ರಾಜಕಾರಣಿಗಳು ಮತ್ತು ಪ್ರಭಾವಿ ವ್ಯಕ್ತಿಗಳೊಂದಿಗೆ ಇರುವ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.
0 Comments