ಮೂಡುಬಿದಿರೆ: ಇಲ್ಲಿನ ಒಂಟಿಕಟ್ಟೆಯಲ್ಲಿರುವ ಕಡಲಕೆರೆಗೆ ವಿವಿಧ ಜಾತಿಯ 25,000 ಮೀನಿನ ಮರಿಗಳನ್ನು ಮಂಗಳವಾರ ಸಮರ್ಪಿಸಲಾಯಿತು.
ಶಾಸಕ ಉಮಾನಾಥ ಕೋಟ್ಯಾನ್ ಮೀನಿನ ಮರಿಗಳನ್ನು ಸಮರ್ಪಿಸಿ, ದೋಣಿ ವಿಹಾರಕ್ಕೆ ಚಾಲನೆ ನೀಡಿ ಮಾತನಾಡಿ ಪ್ರವಾಸಿಗರನ್ನು ಸೆಳೆಯುವ ಕಡಲಕೆರೆಯನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಗೊಳಿಸುವ ಯೋಜನೆಯಿದ್ದು ಈಗಾಗಲೇ ಅನುದಾನಕ್ಕಾಗಿ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದರು.
ಅರಣ್ಯ ಇಲಾಖೆಯ ಕುಂದಾಪುರ ವಿಭಾಗದ ಉಪ ಅರಣ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್ ರೆಡ್ಡಿ, ಮೂಡುಬಿದಿರೆ ಉಪವಲಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್, ದ.ಕ.ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಸದಸ್ಯರಾದ ಪಿ.ಕೆ.ತೋಮಸ್, ಶ್ವೇತಾ ಕುಮಾರಿ, ಪಾಲಡ್ಕ ಗ್ರಾ.ಪಂ.ಅಧ್ಯಕ್ಷ ದಿನೇಶ್ ಕೆ., ಹಿರಿಯರಾದ ಕೆ.ಆರ್.ಪಂಡಿತ್, ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್, ರೋಟರಿ ಕ್ಲಬ್ ಅಧ್ಯಕ್ಷ ಮಹಮ್ಮದ್ ಅರೀಫ್, ಕಾರ್ಯದರ್ಶಿ ಅವಿಲ್ ಡಿ"ಸೋಜಾ ಮತ್ತು ಸದಸ್ಯರು, ರೋಟರಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಾರಾಯಣ ಪಿ.ಎಂ,ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ರಮ್ಯಾ ವಿಕಾಸ್, ಕಾರ್ಯದರ್ಶಿ ಸ್ವಾತಿ ಬೋರ್ಕರ್ ಮತ್ತು ಸದಸ್ಯರು, ಆಲಂಗಾರು ಲಯನ್ಸ್ ಕ್ಲಬ್ ನ ಅಧ್ಯಕ್ಷ ವಿನೋದ್ ನಝ್ರತ್ ಮತ್ತು ಸದಸ್ಯರು. ಮೂಡುಬಿದಿರೆ ವಲಯಾರಣ್ಯಾಧಿಕಾರಿ ಹೇಮಗಿರಿ ಅಂಗಡಿ, ಉಪವಲಯಾರಣ್ಯಧಿಕಾರಿಗಳಾದ ಅಶ್ವಿತ್ ಗಟ್ಟಿ ಮತ್ತು ಮಂಜುನಾಥ ಗಾಣಿಗ,ನೇತಾಜಿ ಬ್ರಿಗೇಡ್ ನ ಕ ಸಂಚಾಲಕ ರಾಹುಲ್ ಕುಲಾಲ್, ಡಲಕೆರೆಯ ಬೋಟಿಂಗ್ ವ್ಯವಸ್ಥೆಯನ್ನು ನೋಡಿಕೊಳ್ಳುತ್ತಿರುವ ಡಾ.ನಝೀರ್ ಸಾಬೇಬ್ ಮತ್ತಿತರರು ಈ ಸಂದರ್ಭದಲ್ಲಿದ್ದರು.
ಮೂಡುಬಿದಿರೆ ಅರಣ್ಯ ಇಲಾಖೆ, ಮೂಡುಬಿದಿರೆಯ ರೋಟರಿ ಕ್ಲಬ್, ಇನ್ನರ್ ವ್ಹೀಲ್ ಕ್ಲಬ್ ಮತ್ತು ಆಲಂಗಾರು ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯಿತು.
0 Comments