ಬಿಲ್ಲವ,ಈಡಿಗ ಸಹಿತ 26 ಉಪ ಪಂಗಡಗಳಿಗೆ ಗುಡ್ ನ್ಯೂಸ್.! ನಾರಾಯಣ ಗುರು ಕೋಶ ಜಾರಿಗೆ ತಂದ ರಾಜ್ಯ ಸರ್ಕಾರ

ಜಾಹೀರಾತು/Advertisment
ಜಾಹೀರಾತು/Advertisment

 


ಬಿಲ್ಲವ, ಈಡಿಗ, ನಾಮಧಾರಿಗಳು ಸೇರಿದಂತೆ 26 ಉಪ ಪಂಗಡಗಳ ಬೇಡಿಕೆಗೆ ರಾಜ್ಯ ಬಿಜೆಪಿ ಸರ್ಕಾರ ಮನ್ನಣೆ ನೀಡಿದ್ದು ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ "ನಾರಾಯಣ ಗುರು ಕೋಶ" ಎಂಬ ಯೋಜನೆಯನ್ನು ಜಾರಿಗೆ ತಂದಿದೆ.

ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ ಹಿಂದುಳಿದ ವರ್ಗಗಳ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಮುಖ್ಯಮಂತ್ರಿಗಳಿಗೆ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

(ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಹೇಳಿಕೆ: "ನಾರಾಯಣ ಗುರು ಕೋಶ" ಎಂಬ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಕೋಶವೊಂದನ್ನು ನಿರ್ಮಾಣ ಮಾಡಿ ಅದಕ್ಕೆ ಬೇಕಾದ ಅನುದಾನವನ್ನು ಒದಗಿಸಿ ಈಡಿಗ, ಬಿಲ್ಲವ, ನಾಮದಾರಿಗಳು ಸೇರಿದಂತೆ 26 ಉಪ ಪಂಗಡಗಳನ್ನು ನಾರಾಯಣ ಗುರುಗಳ ಹೆಸರಿನಲ್ಲಿ ಅಭಿವೃದ್ಧಿ ಮಾಡಲು ಅನುಕೂಲಕರವಾದ ಆದೇಶ ಹೊರಡಿಸಿದ ಹಿಂದುಳಿದ ವರ್ಗಗಳ ಬಗ್ಗೆ ಅಪಾರ ಕಾಳಜಿ ಹೊಂದಿರುವ ಗೌರವಾನ್ವಿತ ಮುಖ್ಯಮಂತ್ರಿಗಳಾಗಿದ್ದ ಶ್ರೀ ಬಸವರಾಜ ಬೊಮ್ಮಾಯಿಯವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ಹಾಗೂ ಈ ವಿಚಾರದಲ್ಲಿ ಸರ್ಕಾರಕ್ಕೆ ಮಾರ್ಗದರ್ಶನ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ನಳಿನ್ ಕುಮಾರ್ ಕಟೀಲುರವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.)

Post a Comment

0 Comments