ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಹರಿಪದವು ಎಂಬಲ್ಲಿ ಹುಲಿವೇಷಧಾರಿ ಜಯಾನಂದ ಆಚಾರ್ಯ (65) ಎಂಬುವವರನ್ನು ಯುವಕನೋರ್ವ ಕೊಲೆಗೈದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೊಲೆ ಆರೋಪಿ ರಾಜೇಶ್ ಪೂಜಾರಿ (31) ಎಂಬಾತನನ್ನು ಕಾವೂರು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಹುಲಿವೇಷಧಾರಿಯಾಗಿದ್ದ ಜಯಾನಂದ ಆಚಾರ್ಯರ ಮೃತದೇಹ ಕುತ್ತಿಗೆಗೆ ದಾರ ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಜಯಾನಂದರ ಸಹೋದರ ಅಚ್ಚುತ ಆಚಾರ್ಯ ಎಂಬುವವರು ಕೊಲೆ ಶಂಕೆ ವ್ಯಕ್ತಪಡಿಸಿ ಕಾವೂರು ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ ಕಾವೂರು ಪೊಲೀಸರು ತನಿಖೆ
0 Comments