ಮಂಗಳೂರಿನಲ್ಲಿ ಸರ್ಕಾರಿ ಕೆಲಸಕ್ಕೆ ಹಾಜರಾದ ಪ್ರವೀಣ್ ನೆಟ್ಟಾರ್ ಪತ್ನಿ: ನಳಿನ್,ಬೊಮ್ಮಾಯಿ ಕಾರ್ಯಕ್ಕೆ ಕಾರ್ಯಕರ್ತರು ಫುಲ್‌ಖುಷ್

 

ಸುಳ್ಯದ ಬೆಳ್ಳಾರೆಯಲ್ಲಿ ಮತಾಂಧರಿಂದ ಹತ್ಯೆಗೊಳಗಾಗಿದ್ದ ಬಿಜೆಪಿ ಯುವಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿಗಳ ಆದೇಶದಂತೆ ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉದ್ಯೋಗ ಲಭಿಸಿದೆ. ಇಂದು ಅಧಿಕೃತವಾಗಿ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ ಉದ್ಯೋಗಕ್ಕೆ ಹಾಜರಾಗಿರುವ ನೂತನ ಕುಮಾರಿ ಅವರು ಆರಂಭದಲ್ಲಿ ಖುದ್ದು ಜಿಲ್ಲಾಧಿಕಾರಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಪ್ರವೀಣ್ ನೆಟ್ಟಾರ್ ಹತ್ಯೆಯ ನಂತರ ಬಿಜೆಪಿ ವಲಯದಲ್ಲಿ ದೊಡ್ಡ ಆಕ್ರೋಶ ಎದ್ದಿದ್ದು ನಂತರ ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಸರ್ವರೀತಿಯಲ್ಲೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸಹಕಾರವನ್ನು ನೀಡುತ್ತಿದ್ದರು. ಈ ಹಿನ್ನಲೆಯಲ್ಲಿ ನೂತನ ಕುಮಾರಿ ಅವರ ಉದ್ಯೋಗದ ವಿಚಾರವಾಗಿ ಅನೇಕ ಬಾರಿ ಮುಖ್ಯಮಂತ್ರಿಗಳ ಗಮನ ಸೆಳೆದು ಸರ್ಕಾರಿ ಉದ್ಯೋಗವನ್ನು ಲಭಿಸಿ ಕೊಡುವಲ್ಲಿ ಯಶಸ್ವಿಯಾಗಿದ್ದಾರೆ ಮಾತ್ರವಲ್ಲದೆ ಈ ಉದ್ಯೋಗವನ್ನು ಮಂಗಳೂರಿನಲ್ಲೇ ಸಿಗುವ ಹಾಗೆ ನಳಿನ್ ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿಗಳ ಬಳಿ ಬೇಡಿಕೆ ಇಟ್ಟಿದ್ದು ಅದಕ್ಕೂ ಸಮ್ಮತಿ ಸೂಚಿಸಿದ ಮುಖ್ಯಮಂತ್ರಿಗಳು ಇದೀಗ ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲೇ ಉದ್ಯೋಗ ಮಾಡುವಂತೆ ಸಹಕರಿಸಿದ್ದಾರೆ. ಇದು ಬಿಜೆಪಿ ಕಾರ್ಯಕರ್ತರಿಗೆ ಸಂತಸ ಮತ್ತು ಸಮಾಧಾನ ನೀಡಿದೆ ಎಂದು ಅನೇಕ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಮತ್ತು ಆಕ್ರೋಶಗೊಂಡಿದ್ದ ಹಿಂದೂ ಕಾರ್ಯಕರ್ತರು ಸಂಸದರನ್ನು ಮತ್ತು ಮುಖ್ಯಮಂತ್ರಿಗಳನ್ನು ಕೊಂಡಾಡುತ್ತಿದ್ದಾರೆ.

Post a Comment

0 Comments

Advertisement