ಬ್ರೇಕಿಂಗ್ : ಹಿಜಾಬ್ ಬ್ಯಾನ್ ಕೇಸ್: ಸುಪ್ರೀಂ ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು, ಕೇಸ್ ಸಿಜೆಐ ಪೀಠಕ್ಕೆ ವರ್ಗಾವಣೆ

ಜಾಹೀರಾತು/Advertisment
ಜಾಹೀರಾತು/Advertisment

 

ರಾಜ್ಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ಪ್ರಕರಣವನ್ನ CJI ಪೀಠಕ್ಕೆ ವರ್ಗಾವಣೆ ಮಾಡಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಶಾಲೆಗಳಲ್ಲಿ ಹಿಜಾಬ್ ಗೆ ಅವಕಾಶ ಕೋರಿ ಹೈಕೋರ್ಟ್‌ ಆದೇಶ ಪ್ರಶ್ನಿಸಿದ್ದ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಇಂದು ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತ ಮತ್ತು ಸುಧಾಂಶು ಧುಲಿಯಾ ವಿಭಜಿತ ತೀರ್ಪು ನೀಡಿದ್ದಾರೆ.

ನ್ಯಾಯಮೂರ್ತಿ ಸುಧಾಂಶು ಮುಸ್ಲಿಂ ವಿದ್ಯಾರ್ಥಿನಿಯ ಮೇಲ್ಮನವಿ ಅರ್ಜಿಯನ್ನು ವಜಾ ಮಾಡಿದ್ದಾರೆ. ಆದರೆ ನ್ಯಾ.ಹೇಮಂತ್ ಗುಪ್ತಾ ಹಿಜಾಬ್ ಪರವಾಗಿ ತೀರ್ಪು ನೀಡಿದ್ದಾರೆ. ಇಬ್ಬರು ವಿಭಿನ್ನ ತೀರ್ಪು ನೀಡಿರುವುದರಿಂದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳ ನ್ಯಾಯಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.


Post a Comment

0 Comments